MP Renukacharya: ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಬದಲಾವಣೆ ವಿಚಾರ ಚರ್ಚೆ ಆಗುತ್ತಿದ್ದರೆ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಆಯ್ಕೆ ಕುರಿತು ಚರ್ಚೆಯಾಗುತ್ತದೆ. ಆದರೆ ಈ ನಡುವೆ ಕೆಲವು ಶಾಸಕರು ಕಾಂಗ್ರೆಸ್ ಅತ್ತ ಮುಖ ಮಾಡಿ ಬಿಜೆಪಿಗೆ ಕೋಕ್ ನೀಡಲು ಸಿದ್ದರಾಗಿದ್ದಾರೆ. ಇದರಲ್ಲಿ ಬಿಜೆಪಿಯ ಪ್ರಬಲ ನಾಯಕನಾಗಿರುವಂತಹ ಎಂಪಿ ರೇಣುಕಾಚಾರ್ಯ(MP Renukacharya) ಕೂಡ ಒಬ್ಬರು ಎಂಬ ಸುದ್ದಿ ಕೇಳಿ ಬರುತ್ತಿದೆ. ಆದರೀಗ ಕಾಂಗ್ರೆಸ್ ಸೇರ್ಪಡೆ ವಿಚಾರದ ಬಗ್ಗೆ ರೇಣುಕಾಚಾರ್ಯರವರು ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ.
ಹೌದು, ಬಿಜೆಪಿಯ ಮಾಜಿ ಶಾಸಕರಾದ ಎಂ ಪಿ ರೇಣುಕಾಚಾರ್ಯ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ವಿಚಾರ ಮೊದಲಿಂದಲೂ ಸಾಕಷ್ಟು ಸದ್ದುಮಾಡುತ್ತಿದೆ. ಬಿಜೆಪಿ ವಿರುದ್ಧ ಅವರು ನೀಡುತ್ತಿದ್ದ ಹೇಳಿಕೆಗಳು ಸಾಕಷ್ಟು ಇದಕ್ಕೆ ಪುಷ್ಟಿ ನೀಡಿತ್ತು. ಕೆಲ ದಿನಗಳಿಂದ ಈ ವಿಚಾರ ತಣ್ಣಗಾಗಿದ್ದು ಇದೀಗ ಮತ್ತೆ ಮುನ್ನಲೆಗೆ ಬಂದಿದೆ. ಈ ಕುರಿತು ಮತ್ತೆ ಮೌನ ಮುರಿದ ರೇಣುಕಾಚಾರ್ಯ ಅವರು ಕಾಂಗ್ರೆಸ್ ಸೇರ್ಪಡೆ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ.
‘ಬಿಜೆಪಿಯಲ್ಲಿ ನಾನೊಬ್ಬ ಸಾಮಾನ್ಯ ಕಾರ್ಯಕರ್ತ. ಕಾಂಗ್ರೆಸ್ ಸೇರಲು ನಾನು ಅರ್ಜಿ ಹಾಕಿಲ್ಲ. ಯಾರ ಮನೆ ಬಾಗಿಲನ್ನೂ ತುಳಿದಿಲ್ಲ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ, ಸಚಿವರಾದ ಎಸ್ಸೆಸ್ ಮಲ್ಲಿಕಾರ್ಜುನ, ಕೃಷ್ಣ ಭೈರೇಗೌಡ, ಚಲುವರಾಯಸ್ವಾಮಿ, ಇತರರನ್ನು ಭೇಟಿಯಾಗಿದ್ದು ಕ್ಷೇತ್ರದ ಅಭಿವೃದ್ಧಿ ವಿಚಾರಕ್ಕೆ ಹೊರತು ಬೇರೆ ಯಾವುದಕ್ಕೂ ಅಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ , ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಚಿವರಾದ ಕೃಷ್ಣಭೈರೇಗೌಡ, ಎಸ್.ಎಸ್.ಮಲ್ಲಿಕಾರ್ಜುನ್, ಚೆಲುವರಾಯಸ್ವಾಮಿ ಅವರುಗಳನ್ನು ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಭೇಟಿ ಮಾಡಿದ್ದೆ. ರಾಜ್ಯದ ಮುಖ್ಯಮಂತ್ರಿಯನ್ನು ಯಾರು ಬೇಕಾದರೂ ಭೇಟಿ ಮಾಡಬಹುದು ಎಂದು ಮತ್ತೆ ಗುಡುಗಿದ್ದಾರೆ.
ಅಲ್ಲದೆ ನನ್ನ ಬಗ್ಗೆ ಹಗರುವಾಗಿ ಮಾತನಾಡುವುದನ್ನು ನಿಲ್ಲಿಸಿ. ಶಾಸಕರಾಗಿ ಆರು ತಿಂಗಳಾಗಿದ್ದರೂ ಎಷ್ಟು ಬಾರಿ ಕ್ಷೇತ್ರದಲ್ಲಿ ಬರ ಅಧ್ಯಯನ ನಡೆಸಿದ್ದೀರಿ. ಅಭಿವೃದ್ದಿ ಮತ್ತು ಬರಗಾಲದಲ್ಲಿ ರಾಜಕೀಯ ಮಾಡಬಾರದೆಂದು ಸುಮ್ಮನಿದ್ದೇನೆ. ಇದು ನನ್ನ ದೌರ್ಬಲ್ಯವಲ್ಲ, ನಿಮಗಿಂತ 10 ಪಟ್ಟು ಮಾತನಾಡಲು ನನಗೂ ಬರುತ್ತದೆ ಎಂದು ಕಾಂಗ್ರೆಸ್ ಶಾಸಕ ಶಾಂತನಗೌಡ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ: 7th pay commission: ಬೆಳ್ಳಂಬೆಳಗ್ಗೆಯೇ ಸರ್ಕಾರಿ ನೌಕರರಿಗೆ ಬಿಗ್ ಶಾಕ್- ಸದ್ಯಕ್ಕಿಲ್ಲ ವೇತನ ಪರಿಷ್ಕರಣೆ !!
