Home » Kerala: ಕೇರಳಕ್ಕೆ ಬಿಜೆಪಿ ಗ್ರಾಂಡ್ ಎಂಟ್ರಿ; ಕಾಂಗ್ರೆಸ್ ನೇತೃತ್ವದ ಇಂಡಿಯ ಬಣಕ್ಕೆ 15-18 ಸ್ಥಾನ

Kerala: ಕೇರಳಕ್ಕೆ ಬಿಜೆಪಿ ಗ್ರಾಂಡ್ ಎಂಟ್ರಿ; ಕಾಂಗ್ರೆಸ್ ನೇತೃತ್ವದ ಇಂಡಿಯ ಬಣಕ್ಕೆ 15-18 ಸ್ಥಾನ

0 comments

Kerala: ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) 2024ರಲ್ಲಿ ಮತ್ತೊಮ್ಮೆ ಕೇರಳದಲ್ಲಿ ಜಯಭೇರಿ ಬಾರಿಸಲು ಸಿದ್ಧವಾಗಿದೆ. ಆದರೆ ಬಿಜೆಪಿ ನೇತೃತ್ವದ ಎನ್‌ಡಿಎ ದಕ್ಷಿಣ ರಾಜ್ಯದಲ್ಲಿ ತನ್ನ ಖಾತೆಯನ್ನು ತೆರೆಯಲಿದೆ ಎಂದು ಎಕ್ಸಿಟ್ ಪೋಲ್‌ಗಳ ಸಮೀಕ್ಷೆ ತೋರಿಸುತ್ತದೆ.

ಕಮ್ಯುನಿಸ್ಟ್ ಪಕ್ಷದ ಪ್ರಾಬಲ್ಯವಿರುವ ಕೇರಳದಲ್ಲಿ (Kerala Lok Sabha Elections) ಇದುವರೆಗೂ ಬಿಜೆಪಿ ಒಂದೇ ಒಂದು ಲೋಕಸಭಾ ಕ್ಷೇತ್ರವನ್ನು ತನ್ನ ತೆಕ್ಕೆಗೆ ಹಾಕಿಕೊಳ್ಳಲು ಸಾಧ್ಯವಾಗಿರಲಿಲ್ಲ. ಆದರೆ, ಇದೇ ಮೊದಲ ಬಾರಿಗೆ ಕೇರಳದಲ್ಲಿ ಬಿಜೆಪಿ ಗೆಲ್ಲುವ ಸೂಚನೆಯನ್ನು ಎಕ್ಸಿಟ್ ಪೋಲ್ (Exit Poll) ನೀಡಿದೆ. ಭಾರತೀಯ ಜನತಾ ಪಕ್ಷ (BJP) ನೇತೃತ್ವದ ಎನ್‌ಡಿಎ ದಕ್ಷಿಣದ ರಾಜ್ಯಗಳಾದ ತಮಿಳುನಾಡು ಮತ್ತು ಕೇರಳದಲ್ಲಿ ಮೊದಲ ಬಾರಿಗೆ ಖಾತೆ ತೆರೆಯಲಿದೆ. ದಕ್ಷಿಣದ ರಾಜ್ಯಗಳಾದ ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ (NDA) 57-65 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ಹಾಗೇ, ಇಂಡಿಯ (INDIA) ಬ್ಲಾಕ್ 59-66 ಸ್ಥಾನ ಗೆಲ್ಲುವ ಸಾಧ್ಯತೆಯಿದೆ.

 

ನ್ಯೂಸ್ 18 ಮೆಗಾ ಎಕ್ಸಿಟ್ ಪೋಲ್ ಪ್ರಕಾರ, 1-3 ಸ್ಥಾನಗಳನ್ನು ಪಡೆಯುವ ಮೂಲಕ ಎನ್‌ಡಿಎ ಕೇರಳದಲ್ಲಿ ತನ್ನ ಖಾತೆ ತೆರೆಯಲು ಸಜ್ಜಾಗಿದೆ. 2024 ರ ಲೋಕಸಭಾ ಚುನಾವಣೆಯು ಕೇರಳದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಎರಡಕ್ಕೂ ನಿರ್ಣಾಯಕವಾಗಿದೆ. 20 ಲೋಕಸಭಾ ಕ್ಷೇತ್ರಗಳು ಸ್ಪರ್ಧೆಯಲ್ಲಿದ್ದು, ಕೇರಳ ರಾಜ್ಯದಲ್ಲಿ ಏಪ್ರಿಲ್ 26 ರಂದು ಮತದಾನ ನಡೆದಿದೆ. ಈ ಬಾರಿ 70.35% ರಷ್ಟು ಮತದಾನವಾಗಿದೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಕೇರಳ ಕಾಂಗ್ರೆಸ್ನ ಭದ್ರಕೋಟೆಯಾಗಿತ್ತು. 2019ರ ಚುನಾವಣೆಯಲ್ಲಿ ಕಾಂಗ್ರೆಸ್ ಕೇರಳದಲ್ಲಿ ಬಹುಪಾಲು ಸ್ಥಾನಗಳನ್ನು ಪಡೆದುಕೊಂಡಿತ್ತು. ಆದರೆ, ಎನ್ಡಿಎಗೆ ಒಂದೇ ಒಂದು ಸ್ಥಾನವೂ ಸಿಕ್ಕಿರಲಿಲ್ಲ. ಕೇರಳ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮತ್ತು ಸಿಪಿಐ(ಎಂ) ನೇತೃತ್ವದ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್‌ಡಿಎಫ್) ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ. ಯುಡಿಎಫ್ ತನ್ನ 2019ರ ಸ್ಥಾನಗಳಷ್ಟೇ ಪಡೆಯಬಹುದೇ ಎಂದು ನಿರ್ಧರಿಸುವಲ್ಲಿ ಎನ್‌ಡಿಎ ಮತಗಳು ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ.

You may also like

Leave a Comment