Gruha Jyoti scheme application : ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷೆಯ ಐದು ಗ್ಯಾರಂಟಿಗಳ ಪೈಕಿ ಎರಡನೇ ಗ್ಯಾರಂಟಿ ಗೃಹಜ್ಯೋತಿ ಯೋಜನೆಗೆ ಇಂದಿನಿಂದಲೇ ಅರ್ಜಿ (Gruha Jyoti scheme application)ಸಲ್ಲಿಕೆ ಪ್ರಾರಂಭವಾಗಿದೆ ಎಂದು ರಾಜ್ಯ ಸರ್ಕಾರ ಪ್ರಕಟಣೆ ಮೂಲಕ ತಿಳಿಸಿದೆ.
ಭಾರೀ ಬಹುಮತದೊಂದಿಗೆ ಗೆಲುವು ಸಾಧಿಸಿದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆ ಇದೇ ತಿಂಗಳು 15 ರಿಂದ ಅರ್ಜಿ ಸಲ್ಲಿಕೆ ಆರಂಭ ಎಂದು ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ರು, ಆದ್ರೆ ತಾಂತ್ರಿಕ ದೋಷಗಳಿಂದಾಗಿ ಅರ್ಜಿ ಸಲ್ಲಿಕೆ ಮಾಡುವ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿತ್ತು.
ಇದೀಗ ಜುಲೈ 1ರಿಂದ ಜಾರಿಯಾಗಲಿರುವ ಗೃಹ ಜ್ಯೋತಿ ಯೋಜನೆ ಲಾಭವನ್ನು ಪಡೆಯಬೇಕೆಂದ್ರೆ ಸೇವಾ ಸಿಂಧು ಪೋರ್ಟಲ್ ಮೂಲಕ ಇಂದಿನಿಂದಲೇ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಅರ್ಜಿ ಪ್ರಕ್ರಿಯೆ ಇಂದಿನಿಂದಲೇ ಆರಂಭವಾಗುತ್ತದೆ. ನೀವು ಈ ಯೋಜನೆ ಲಾಭ ಪಡೆಯಬೇಕೆಂದ್ರೆ ನಿಮ್ಮ ಮೊಬೈಲ್, ಕಂಪ್ಯೂಟರ್, ಲ್ಯಾಪ್ಟಾಪ್ ಮೂಲಕ ಅಥವಾ ಮನೆಯ ಸಮೀಪವಿರುವ ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ನಾಡ ಕಚೇರಿ, ಗ್ರಾ.ಪಂ. ಕಚೇರಿ, ವಿದ್ಯುತ್ ಕಚೇರಿಗಳಲ್ಲಿ ಮಾಡಿಕೊಡಲಾಗುತ್ತದೆ. ಅರ್ಜಿ ಸಲ್ಲಿಕೆ ಮಾಡಲು https://sevasindhugss.karnataka.gov.in ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಅಲ್ಲದೇ ಸಹಾಯವಾಣಿಗಾಗಿ ನಂಬರ್ 1912 ಮಾಹಿತಿ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಕೆ ಮಾಡುವ ಸಂದರ್ಭದಲ್ಲಿ ಆಧಾರ್ ಕಾರ್ಡ್, ಆರ್ಆರ್ ನಂಬರ್, ಮೊಬೈಲ್ ಸಂಖ್ಯೆ, ಮನೆ ಬಾಡಿಗೆ ಕರಾರು ಪತ್ರ ಲಗತ್ತಿಸುವುದು ಸೂಕ್ತವಾಗಿದೆ ಎಂದು ಸೂಚನೆ ನೀಡಲಾಗಿದೆ.
ಇದನ್ನೂ ಓದಿ: Chamarajnagar: ಉಚಿತ ಬಸ್ ಪ್ರಯಾಣ ಎಫೆಕ್ಟ್ : ಬಸ್ ಹತ್ತೋ ಭರದಲ್ಲಿ ಡೋರ್ ಮುರಿದ ನಾರಿಮಣಿಯರು!! ಕಂಡಕ್ಟರ್ ಪರದಾಟ!!
