Home » Asha workers salary: ಆಶಾ ಕಾರ್ಯಕರ್ತೆಯರಿಗೆ ಬಿಗ್ ಶಾಕ್- ವೇತನವೂ ಇಲ್ಲ, ಪೆನ್ಶನ್ನೂ ಇಲ್ಲ ಎಂದು ಉಲ್ಟಾ ಹೊಡೆದ ಸರ್ಕಾರ !!

Asha workers salary: ಆಶಾ ಕಾರ್ಯಕರ್ತೆಯರಿಗೆ ಬಿಗ್ ಶಾಕ್- ವೇತನವೂ ಇಲ್ಲ, ಪೆನ್ಶನ್ನೂ ಇಲ್ಲ ಎಂದು ಉಲ್ಟಾ ಹೊಡೆದ ಸರ್ಕಾರ !!

by ಹೊಸಕನ್ನಡ
1 comment
Asha workers salary

 

Asha Workers Salary: ಆಶಾ ಕಾರ್ಯಕರ್ತೆಯರ ಸಂಬಳ (Asha Workers Salary) ಹೆಚ್ಚು ಮಾಡಲು ಸಾಧ್ಯವಿಲ್ಲ. ಹೆಚ್ಟು ಮಾಡುವಂತಹ ಯಾವುದೇ ರೀತಿಯ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಅಂತಾ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ತಿಳಿಸಿದ್ದಾರೆ.

ಕಳೆದ ವಾರವಷ್ಟೇ ಸಿಎಂ ಸಿದ್ದರಾಮಯ್ಯ(CM siddaramaiah) ನವರು ತಮ್ಮ 14ನೇ ಬಜೆಟ್ ಮಂಡನೆ ಮಾಡಿದ್ದು, ವಿವಿಧ ಇಲಾಖೆಗಳಿಗೆ ಕೋಟ್ಯಾಂತರ ರೂಪಾಯಿ ಅನುದಾನ ಘೋಷಣೆ ಮಾಡಿ, ಹಲವಾರು ಯೋಜನೆಗಳನ್ನು ಜಾರಿಗೊಳಿಸುವುದಾಗಿ ರಾಜ್ಯದ ಜನತೆಗೆ ಸಂತೋಷವನ್ನುಂಟುಮಾಡಿದ್ದರು. ಅಲ್ಲದೆ ಅಂಗನವಾಡಿ ಕಾರ್ಯಕರ್ತರಿಗೆ, ಆಶಾ ಕಾರ್ಯಕರ್ತೆಯರಿಗೆ, ಅಡುಗೆ ಸಿಬ್ಬಂದಿಗಳಿಗೂ ವೇತನ ಹೆಚ್ಚಳ ಮಾಡುವುದಾಗಿ ತಿಳಿಸಿ ಗುಡ್ ನ್ಯೂಸ್ ಕೊಟ್ಟಿತ್ತು. ಆದರೀಗ ಈ ಬೆನ್ನಲ್ಲೇ ಸರ್ಕಾರವು ಆಶಾ ಕಾರ್ಯಕರ್ತೆಯರಿಗೆ ಶಾಕ್ ನೀಡಿದೆ.

ಹೌದು, ರಾಜ್ಯದಲ್ಲಿ ಸದ್ಯ ವಿಧಾನಮಂಡಲ ಅಧಿವೇಶನ(Assembly session) ನಡೆಯುತ್ತಿದ್ದು, ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ JDSನ ತಿಪ್ಪೇಸ್ವಾಮಿ ಅವರು ‘ಆಶಾ ಕಾರ್ಯಕರ್ತೆಯರ ಸಂಬಳ ಜಾಸ್ತಿ ಮಾಡಬೇಕು. ಅವರಿಗೂ ಪಿಂಚಣಿ ಕೊಡಬೇಕು. ಹೊಸ ಸ್ಮಾರ್ಟ್‌ಫೋನ್‌(Smart phone)ಗಳನ್ನ ನೀಡಬೇಕು’ ಎಂದು ಆಗ್ರಹಿಸಿದರು.

ಇದಕ್ಕೆ ಉತ್ತರ ನೀಡಿದ ಸಚಿವ ದಿನೇಶ್ ಗುಂಡೂರಾವ್(Dinesh gunduraou), ಆಶಾ ಕಾರ್ಯಕರ್ತೆಯರ ಸಂಬಳ ಹೆಚ್ಚಳ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಕಡ್ಡಿ ತುಂಡಾಗುವಂತೆ ನುಡಿದಿದ್ದಾರೆ. ಬಳಿಕ ಮಾತನಾಡಿದ ಅವರು ‘ರಾಜ್ಯ ಸರ್ಕಾರದಿಂದ ಈಗಾಗಲೇ 5 ಸಾವಿರ ಗೌರವ ಧನ ನೀಡಲಾಗ್ತಿದೆ‌. ಕೇಂದ್ರದಿಂದ 5-8 ಸಾವಿರ ಗೌರವ ಧನ ಸಿಗುತ್ತಿದೆ. ಒಟ್ಟಾರೆ 10-13 ಸಾವಿರ ಗೌರವ ಧನ ಸಿಗುತ್ತಿದೆ‌. ಸದ್ಯ ಅವರ ಗೌರವ ಧನ ಹೆಚ್ಚಳ ಸಾಧ್ಯವಿಲ್ಲ ಎಂದರು.

ಪಿಂಚಣಿಯೂ ಇಲ್ಲ.. !!
ಅಲ್ಲದೆ ಆಶಾ ಕಾರ್ಯಕರ್ತೆಯರಿಗೆ ಪಿಂಚಣಿ(Pention) ವ್ಯವಸ್ಥೆಯೂ ಸಾಧ್ಯವಿಲ್ಲ. ಅವರು ಸರ್ಕಾರಿ ಉದ್ಯೋಗಿಗಳು ಆಗಿದ್ದರೆ ಪಿಂಚಣಿ ಎಲ್ಲದೂ ಸಿಗುತ್ತಿತ್ತು. ಆದ್ರೆ ನಿಯಮದ ಪ್ರಕಾರ ಅವರಿಗೆ ಪಿಂಚಣಿ ಕೊಡಲು ಸಾಧ್ಯವಿಲ್ಲ. ಆಶಾ ಕಾರ್ಯಕರ್ತೆಯರು ಗ್ಯಾರಂಟಿ ಯೋಜನೆಗೆ ಅರ್ಜಿ ಹಾಕಬಹುದು. ಸರ್ಕಾರ ಅದಕ್ಕೆ ಅವಕಾಶ ಕೊಟ್ಟಿದೆ. ಹೀಗಾಗಿ ಪರೋಕ್ಷವಾಗಿ ಅವರಿಗೆ ಅನುಕೂಲ ಆಗಿದೆ. ಸದ್ಯ ಗೌರವ ಧನ ಹೆಚ್ಚಳ ಮಾಡಲು ಸಾಧ್ಯವಿಲ್ಲ ಎಂದರು.

ಸ್ಮಾರ್ಟ್ ಫೋನ್ ಕೊಡೋ ಬಗ್ಗೆ ಚಿಂತನೆ !!
ವೇತನ ಹೆಚ್ಚಳ ಹಾಗೂ ಪಿಂಚಣಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದ ಸಚಿವರು, ಆಶಾ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್(Smart phone) ಕೊಡೋ ಬಗ್ಗೆ ಚಿಂತನೆ ಮಾಡ್ತೀವಿ. ಅದನ್ನು ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿ, ಸಾಧಕ-ಬಾಧಕಗಳನ್ನು ಅರಿತು ಚಿಂತನೆ ನಡೆಸುತ್ತೇವೆ ಎಂದರು.

ಇದನ್ನೂ ಓದಿ: ಇಂದು ಸದನದಲ್ಲಿ ಪೆನ್‌ಡ್ರೈವ್‌ ಬಾಂಬ್ ಸ್ಫೋಟ ?! ಕೊನೆಗೂ ಎಚ್ಡಿಕೆ ಇಂದ ಸಿದ್ದು ಸರ್ಕಾರಕ್ಕೆ ಬಿಗ್ ಶಾಕ್ !!

You may also like

Leave a Comment