JC Madhuswamy: ಕಳೆದ ಕೆಲವು ದಿನಗಳಿಂದ ಮಾಜಿ ಸಚಿವ, ಬಿಜೆಪಿ ನಾಯಕ ಮಾಧುಸ್ವಾಮಿ(JC Madhuswamy) ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಸುದ್ಧಿ ಎಲ್ಲೆಡೆ ಹರಿದಾಡುತ್ತಿತ್ತು. ಈ ಬೆನ್ನಲ್ಲೇ ಕಾಂಗ್ರೆಸ್ ಸೇರುತ್ತಾರೆ ಎನ್ನುವ ಅಂತೆ-ಕಂತೆಗಳಿಗೆ ಸ್ವತಃ ಜೆ.ಸಿ.ಮಾಧುಸ್ವಾಮಿ ಅವರೇ ತೆರೆ ಎಳೆದಿದಿದ್ದು, ಈ ಬಗ್ಗೆ ಗಾಳಿ ಸುದ್ದಿ ಹಬ್ಬಿಸಿದವರ ವಿರುದ್ಧ ಗರಂ ಆಗಿದ್ದಾರೆ.
ಹೌದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ(Assembly election) ಹೀನಾಯವಾಗಿ ಸೋಲುಂಡಿರುವ ಬಿಜೆಪಿ ನಾಯಕ, ಮಾಜಿ ಶಾಸಕ ಜೆ ಸಿ ಮಾಧುಸ್ವಾಮಿ(J C Madhuswamy) ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಬಲವಾದ ಕೂಗು ಮೊನ್ನೆಯಿಂದಲೂ ಕೇಳಿ ಬರುತ್ತಿತ್ತು. ಆದರೀಗ ಈ ಬೆನ್ನಲ್ಲೇ ಈ ಎಲ್ಲಾ ವದಂತಿಗಳಿಗೆ ತೆರೆ ಎಳೆದ ಮಾಧುಸ್ವಾಮಿಯವರು ‘ಕಾಂಗ್ರೆಸ್ (Congress) ಸೇರುವ ದುಃಸ್ಥಿತಿ ನನಗೆ ಬಂದಿಲ್ಲ. ಯಾವನೋ ಮುಠ್ಠಾಳ ಈ ರೀತಿ ಹೇಳಿ ಸುಳ್ಳು ಸುದ್ದಿಯನ್ನು ಟಿವಿಗೆ ಹಾಕಿಸಿದ್ದಾನೆ’ ಎಂದು ಗರಂ ಆಗಿ ಊಹಾ ಪೂಹಗಳಿಗೆ ಅಂತ್ಯ ಹಾಡಿದ್ದಾರೆ.
ಚಿಕ್ಕನಾಯಕನಹಳ್ಳಿಯಲ್ಲಿ (Chikkanayakanahalli) ನಡೆದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್‌ಗೆ ಸೇರುತ್ತೇನೆ ಎಂದು ಯಾವನೋ ಮುಠ್ಠಾಳ ವದಂತಿ ಹಬ್ಬಿಸಿದ್ದಾನೆ. ನನ್ನ ಜೀವನವಿಡೀ ಕಾಂಗ್ರೆಸ್ ವಿರೋಧಿಸಿಕೊಂಡು ಬಂದವನು. ಬಿಜೆಪಿಯ(BPJ) ಸಾಮಾನ್ಯ ಕಾರ್ಯಕರ್ತನಾದ ನನಗೆ ಪಕ್ಷ ಎಲ್ಲಾ ರೀತಿಯ ಮಂತ್ರಿ ಪದವಿ, ಗೌರವ ನೀಡಿದ್ದು, ನನ್ನನ್ನು ಅತ್ಯಂತ ಗೌರವದಿಂದ ನಡೆಸಿಕೊಂಡಿದೆ. ಅಂತಹ ಪಕ್ಷವನ್ನು ತೊರೆದು ನಾನು ಪಕ್ಷಕ್ಕೆ ದ್ರೋಹ ಮಾಡುವುದಿಲ್ಲ’ ಎಂದಿದ್ದಾರೆ.
ಅಲ್ಲದೆ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಭವಿಷ್ಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah), ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(D K Shivkumar) ನಡುವೆ ಅಧಿಕಾರಕ್ಕಾಗಿ ಮುಸುಕಿನ ಗುದ್ದಾಟ ನಡೆಯುತ್ತಿದ್ದು, ಈ ಸರ್ಕಾರ ಹೆಚ್ಚು ಕಾಲ ಅಸ್ತಿತ್ವದಲ್ಲಿ ಇರುವುದಿಲ್ಲ. ಉಭಯ ನಾಯಕರ ನಡುವೆ ಅಧಿಕಾರ ಹಂಚಿಕೆಯ ಒಳ ಜಗಳ ನಡೆಯುತ್ತಿದ್ದು, ಲೋಕಸಭಾ ಚುನಾವಣೆಯ ನಂತರ ಈ ಸರ್ಕಾರ ಪತನಗೊಳ್ಳುತ್ತದೆ ಎಂದರು.
ಅಂದಹಾಗೆ ವಿಧಾನಸಭೆ ಕ್ಷೇತ್ರದ ಚುನಾವಣೆಯಲ್ಲಿ ಸೋಲುಕಂಡಿರುವ ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಬಿಜೆಪಿ ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರ ಉಳಿದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಅಲ್ಲದೇ ತುಮಕೂರು ಲೋಕಸಭಾ ಚುನಾವಣೆಯಲ್ಲಿ(Parliament election) ಕಾಂಗ್ರೆಸ್ನಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನುವ ಸುದ್ದಿ ರಾಜಕಾರಣದಲ್ಲಿ ಸದ್ದು ಮಾಡಿತ್ತು. ಆದರೆ ಇದೀಗ ಇವೆಲ್ಲದಕ್ಕೂ ಮಾಧುಸ್ವಾಮಿ ಫುಲ್ ಸ್ಟಾಪ್ ಇಟ್ಟಿದ್ದಾರೆ.
