Home » Yashpal Suvarna: ಗೃಹ ಸಚಿವರ ಮಗ ಲಿಂಗ ಬದಲಾಯಿಸಿದ್ದು ಮಕ್ಕಳಾಟನಾ? ; ಬಿಜೆಪಿ ಶಾಸಕ ಯಶ್’ಪಾಲ್ ಹೇಳಿಕೆ ವೈರಲ್ !

Yashpal Suvarna: ಗೃಹ ಸಚಿವರ ಮಗ ಲಿಂಗ ಬದಲಾಯಿಸಿದ್ದು ಮಕ್ಕಳಾಟನಾ? ; ಬಿಜೆಪಿ ಶಾಸಕ ಯಶ್’ಪಾಲ್ ಹೇಳಿಕೆ ವೈರಲ್ !

0 comments
Yashpal Suvarna

Yashpal Suvarna: ಉಡುಪಿಯ (Udupi) ಪ್ರಸಿದ್ಧ ಖಾಸಗಿ ನೇತ್ರ ಚಿಕಿತ್ಸಾಲಯ ಮತ್ತು ನರ್ಸಿಂಗ್ ಹೋಂ ಕಾಲೇಜಿನ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡಿ ಬಳಿಕ ವಾಟ್ಸಪ್ ಗ್ರೂಪ್ ಗಳಲ್ಲಿ ಹಂಚಿಕೊಂಡ ಪ್ರಕರಣದ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನೆ ಮೆರವಣಿಗೆ ವೇಳೆ ಗೃಹ ಸಚಿವರ ವಿರುದ್ಧ ಶಾಸಕ ಯಶ್ ಪಾಲ್ ಸುವರ್ಣ (Yashpal Suvarna) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಇದೀಗ ವೈರಲ್ ಆಗಿದೆ.

ಇಂದು ಕ್ಯಾಮರಾ ಇಟ್ಟ ವಿದ್ಯಾರ್ಥಿಗಳು ನಾಳೆ ಬಾಂಬ್ ಕೊಟ್ಟರೂ ಇಡುತ್ತಾರೆ. ಹಾಗಾಗಿ ಈ ಬಗ್ಗೆ ಸಮರ್ಪಕ ತನಿಖೆಯಾಗಬೇಕು ಎಂದು ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು. ಜೊತೆಗೆ ಜಿ ಪರಮೇಶ್ವರ್ ಮಗ ಲಿಂಗ ಬದಲಾಯಿಸಿದ್ದು ಮಕ್ಕಳಾಟನಾ.? ಎಂದು ಗೃಹ ಸಚಿವರ ವಿರುದ್ಧ ಹೇಳಿಕೆ ನೀಡಿದ್ದಾರೆ ಎನ್ನಲಾಗಿದ್ದು, ಸದ್ಯ ಶಾಸಕರ ಹೇಳಿಕೆಗೆ ಕಾಂಗ್ರೆಸ್ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿಯ ಕಾಲೇಜಿನಲ್ಲಿ ಒಂದು ಕೋಮಿನ ವಿದ್ಯಾರ್ಥಿನಿಯರು ಸೇರಿಕೊಂಡು ಶೌಚಾಲಯದಲ್ಲಿ ಕ್ಯಾಮರಾ ಇರಿಸಿದ್ದು, ಇನ್ನೊಂದು ಕೋಮಿನ ವಿದ್ಯಾರ್ಥಿನಿಯರು ಶೌಚಾಲಕ್ಕೆ ತೆರಳುವ ದೃಶ್ಯ ಸೆರೆಯಾಗಿತ್ತು. ಬಳಿಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು ಎನ್ನಲಾಗಿದೆ. ಈ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಿಡಿದೆದ್ದಿದೆ.

ಉಡುಪಿಯಲ್ಲಿ ಬಿಜೆಪಿ ಶಾಸಕರು, ಮಹಿಳಾ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಜೊತೆಗೆ ಬೆಂಗಳೂರಿನ ಸದಾಶಿವನಗರದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಗೃಹ ಸಚಿವರು ಹಾಗೂ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಸದ್ಯ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆ ಕುರಿತು ಕ್ರಮ ಕೈಗೊಳ್ಳಲು ಕಾಲೇಜಿನ ಪ್ರಾಂಶುಪಾಲರು ಇದ್ದಾರೆ. ಅವರು ಕಂಪ್ಲೆಂಟ್ ಕೊಡುತ್ತಾರೆ. ವಿದ್ಯಾರ್ಥಿನಿಯರ ತಂದೆ-ತಾಯಿಯನ್ನು ಕರೆಸಿ ಮಾತನಾಡುತ್ತಾರೆ. ಇದನ್ನು ದೊಡ್ಡ ಪ್ರಮಾಣಕ್ಕೆ ತೆಗೆದುಕೊಂಡು ಹೋಗಬೇಡಿ ಎಂದು ಹೇಳಿದ್ದೇನೆ ಎಂದು ಗೃಹ ಸಚಿವರು (home minister) ಸ್ಪಷ್ಟನೆ ನೀಡಿದ್ದಾರೆ.

ಸ್ನೇಹಿತರ ಮಧ್ಯೆ ಜಗಳ, ಘಟನೆಗಳು ನಡೆಯುವುದು ಸಾಮಾನ್ಯ.
ಇಂತಹ ಸಣ್ಣ ಘಟನೆಗಳಿಗೆ ರಾಜಕೀಯ ಬಣ್ಣ ಬಳಿಯಬೇಡಿ ಎಂದು ಹೇಳಿದ್ದೆ. ಹೊರತು ನಾನು ಮಕ್ಕಳ ಆಟ ಅಂತ ಹೇಳಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ನಂತರ ಸ್ಪಷ್ಟನೆ ನೀಡಿದ್ದಾರೆ.

 

ಇದನ್ನು ಓದಿ: Sandra Bullock Birthday: ಖ್ಯಾತ ನಟಿಯ ಬರ್ತ್ ಡೇ ಗೆ ಬೆತ್ತಲೆ ವಿಡಿಯೋ ಶೇರ್ ಮಾಡಿದ ನಟ! ವಿಡಿಯೋ ವೈರಲ್ 

You may also like

Leave a Comment