Home » Election: ಮತ್ತೆ ಮುಂದಕ್ಕೆ ಹೋದ ಜಿಲ್ಲಾ ಪಂ. ತಾಪಂ ಚುನಾವಣೆ ; ಕ್ಷೇತ್ರ ಮರು ವಿಂಗಡಣೆ, ಮೀಸಲಾತಿಗೆ ಗಡುವು ನೀಡಿದ ಹೈಕೋರ್ಟ್ !

Election: ಮತ್ತೆ ಮುಂದಕ್ಕೆ ಹೋದ ಜಿಲ್ಲಾ ಪಂ. ತಾಪಂ ಚುನಾವಣೆ ; ಕ್ಷೇತ್ರ ಮರು ವಿಂಗಡಣೆ, ಮೀಸಲಾತಿಗೆ ಗಡುವು ನೀಡಿದ ಹೈಕೋರ್ಟ್ !

0 comments
Election

Election: ರಾಜ್ಯ ವಿಧಾನಸಭೆ ಚುನಾವಣೆ ಮುಕ್ತಾಯವಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಈಗ ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ ಚುನಾವಣೆಯ (Election) ಸಿದ್ಧತೆ ನಡೆಯುತ್ತಿದೆ. ಸದ್ಯ ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ.

ರಾಜ್ಯ ಸರ್ಕಾರಕ್ಕೆ ರಾಜ್ಯದ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ನಿಗದಿ ಹಾಗೂ ಕ್ಷೇತ್ರಗಳ ಪುನರ್ ವಿಂಗಡಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಹೈಕೋರ್ಟ್‌ 10 ವಾರಗಳ ಸಮಯ ನೀಡಿದೆ.

ರಾಜ್ಯ ಚುನಾವಣಾ ಆಯೋಗದಿಂದ ಅವಧಿ ಪೂರ್ಣಗೊಂಡ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಗಳಿಗೆ ನಿಗದಿತ ಸಮಯದಲ್ಲಿ ಚುನಾವಣೆ ನಡೆಸಲು ಅನುವು ಮಾಡಿಕೊಡಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ರಾಜ್ಯದಲ್ಲಿ ತಾಲೂಕು ಪಂಚಾಯಿತಿ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮರು ವಿಂಗಡಣೆಗೆ ಸೀಮಾ ನಿರ್ಣಯ ಆಯೋಗ ರಚಿಸಿದ್ದು, ಇದನ್ನು ಪ್ರಶ್ನಿಸಿ ಹೈಕೋರ್ಟ್‌ ಗೆ ಪಿಐಎಲ್ ಸಲ್ಲಿಸಲಾಗಿದೆ. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ 10 ವಾರ ಕಾಲಾವಕಾಶ ನೀಡಿದೆ.

ಈ ಹಿಂದೆ ಮೀಸಲಾತಿ ನಿಗದಿಪಡಿಸುವ ನ್ಯಾಯಾಲಯದ ಆದೇಶ ಪಾಲಿಸಲು ಹೈಕೋರ್ಟ್‌ಗೆ ಸರಕಾರ 4 ವಾರಗಳ ಸಮಯ ಕೇಳಿದೆ. ಸರಕಾರದ ಪರ ಮಾತನಾಡಿದ ನೂತನ ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ, “ಜಿ.ಪಂ.- ತಾ.ಪಂ. ಚುನಾವಣೆ, ಕ್ಷೇತ್ರ ಮರು ವಿಂಗಡಣೆ ಮತ್ತು ಮೀಸಲಾತಿ ನಿಗದಿಗೆ ಸಂಬಂಧಿಸಿದಂತೆ ಹೈಕೋರ್ಟ್‌ ನೀಡಿರುವ ಆದೇಶದಲ್ಲಿನ ಅಂಶಗಳ ಬಗ್ಗೆ ಅಧ್ಯಯನ ನಡೆಸಿ ಅದನ್ನು ಪಾಲಿಸಲು ಸ್ವಲ್ಪ ಕಾಲಾವಕಾಶ ಬೇಕಿದೆ. ಹಾಗಾಗಿ 4 ವಾರ ಕಾಲಾವಕಾಶ ನೀಡಿ” ಎಂದು ಕೇಳಿದ್ದಾರೆ. ಸಮ್ಮತಿ ನೀಡಿದ ನ್ಯಾಯಾಲಯ ಪೀಠ, ವಿಚಾರಣೆಯನ್ನು ಜೂ. 28ಕ್ಕೆ ಮುಂದೂಡಿದೆ.
ಇದೀಗ ಮತ್ತೆ ಜಿಲ್ಲಾ ಪಂ. ತಾಪಂ ಚುನಾವಣೆ ಮುಂದಕ್ಕೆ ಹೋಗಿದೆ. ನ್ಯಾಯಾಲಯ ಮತ್ತೆ 10 ವಾರ ಕಾಲಾವಕಾಶ ನೀಡಿದೆ.

 

 

You may also like

Leave a Comment