Anna bhagya Scheme: ರಾಜ್ಯದಲ್ಲಿ ಈಗಾಗಲೇ ಮೊದಲ ಗ್ಯಾರಂಟಿಯನ್ನು ಭಾನುವಾರ ಜಾರಿಗೊಳಿಸಿದ ಕಾಂಗ್ರೆಸ್ ಸರ್ಕಾರಕ್ಕೆ ಮೆಚ್ಚುಗೆ ಮಹಾಪೂರವೇ ವ್ಯಕ್ತವಾಗುತ್ತಿದೆ. ಇನ್ನು ಕಾಂಗ್ರೆಸ್ 2ನೇ ಗ್ಯಾರಂಟಿಯಾಗಿ ಅನ್ನಭಾಗ್ಯ ಯೋಜನೆಗೆ (Anna bhagya Scheme) ಇದೇ ಜುಲೈ 10 ರಂದು ಚಾಲನೆ ಸಿಗಲಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ.
ಹೌದು, ದೇವನಹಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಮತ್ತೊಂದು ಗ್ಯಾರಂಟಿ ಯೋಜನೆ ಜಾರಿ ಮಾಡಲಾಗುತ್ತದೆ. ಜುಲೈ 10 ರಂದು ಸಿಎಂ ಸಿದ್ದರಾಮಯ್ಯ ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಲಿದ್ದಾರೆ. ರಾಜ್ಯದ ಎಲ್ಲ ಅರ್ಹ ಫಲಾನುಭವಿಗಳಿಗೆ 10 ಕೆಜಿ ಉಚಿತ ನೀಡುವ ಗ್ಯಾರಂಟಿ ಯೋಜನೆಗೆ ಚಾಲನೆ ಕಾರ್ಯಕ್ರಮಕ್ಕೆ ಎಲ್ಲಾ ಸಿದ್ಧತೆಗಳನ್ನು ನಾನೇ ನೋಡಿಕೊಳ್ಳುತ್ತಿದ್ದೇನೆ ಎಂದು ಮಾಹಿತಿ ನೀಡಿದರು.
ಅಲ್ಲದೆ 15 ದಿನದಲ್ಲಿ ಎಲ್ಲಾ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಯಾಗಲಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ. ಜೊತೆಗೆ ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ಬದಲು ಹಣ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ಅಕ್ಕಿ ಪಡೆದವರ ಖಾತೆಗೆ ಮಾತ್ರ ಹಣ ಜಮಾ ಮಾಡಲು ಚಿಂತನೆ ನಡೆಸಲಾಗಿದೆ. ಎಂದರು.
ಅಂದಹಾಗೆ ಜೂನ್ ನಲ್ಲಿ 1,28,23,868 ಕುಟುಂಬಗಳ ಪೈಕಿ 1,17,29,296 ಕುಟುಂಗಳು ಅಕ್ಕಿ ಪಡೆದಿವೆ. ಉಳಿದ 10.94 ಲಕ್ಷ ಬಿಪಿಎಲ್ ಕುಟುಂಬಗಳು ಪಡಿತರ ಅಕ್ಕಿ ಪಡೆದಿರಲಿಲ್ಲ. 10.94 ಲಕ್ಷ ಕುಟುಂಬ ಅಂದರೆ ಅಂದಾಜು 20 ಲಕ್ಷ ಜನ ಅಕ್ಕಿ ಪಡೆದುಕೊಂಡಿಲ್ಲ. ಕಳೆದ 3 ತಿಂಗಳಿಂದ 5,37,213 ಬಿಪಿಎಲ್ ಕುಟುಂಬಸ್ಥರು ಅಕ್ಕಿ ಪಡೆದಿಲ್ಲ. ಹೀಗಾಗಿ ಅಕ್ಕಿ ಪಡೆಯದವರಿಗೆ ಹಣ ನೀಡದಿರಲು ಆಹಾರ ಇಲಾಖೆ ಚಿಂತನೆ ನಡೆಸಿದೆ ಎನ್ನಲಾಗಿದೆ.
ಇದನ್ನು ಓದಿ: BIGG NEWS: ಮಹಿಳೆಯರಿಗೆ ಇನ್ನೊಂದು ಗ್ಯಾರಂಟಿ | ಶಕ್ತಿ ಯೋಜನೆ, ಗೃಹಲಕ್ಷ್ಮಿ ಆಯ್ತು, ಇನ್ನು ಸ್ತ್ರೀಯರಿಗೆ 3 ದಿನ ರಜೆ !
