Siddaramaiah: ಸಿಎಂ ಸಿದ್ದರಾಮಯ್ಯನವರ (Siddaramaiah) ನೂತನ ಸರ್ಕಾರ ರಚನೆಯಾದ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು ಇದೇ ಮೊದಲಲ್ಲ. ಅದಲ್ಲದೆ ರಾಜ್ಯ ಸರ್ಕಾರದ ವಿರುದ್ಧ ಮತ್ತು ಮುಖ್ಯಮಂತ್ರಿಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದವರಿಗೆ ಈ ಮೊದಲು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿತ್ತು.
ಅಂತೆಯೇ ಇದೀಗ, ಬಿಜೆಪಿ ಪಕ್ಷದ ದಾವಣಗೆರೆ ಕಾರ್ಯಕರ್ತ ಹೆಸರಿನ ಫೇಸ್ ಬುಕ್ ಖಾತೆಯಿಂದ ಸಿದ್ದು ಸವಾರಿ ಮಸೀದಿ ಕಡೆ ಎಂದು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಲಾಗಿದ್ದು, ಈ ಪೋಸ್ಟ್ಗೆ ಮತ್ತಷ್ಟು ಅವಹೇಳನಕಾರಿಯಾಗಿ ಹತ್ತಾರು ಜನ ಕಾಮೆಂಟ್ ಹಾಕಿದ್ದಾರೆ. ಹಾಗಾಗಿ ಪೋಸ್ಟ್ ಮಾಡಿದ ಹಾಗೂ ಅದಕ್ಕೆ ಕಾಮೆಂಟ್ ಮಾಡಿದವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಕೆಪಿಸಿಸಿ ವಕ್ತಾರ ಡಿ ಬಸವರಾಜ್ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಹೌದು, ಈಗಾಗಲೇ ಸಿಎಂ ಸಿದ್ದರಾಮಯ್ಯರಂತಹ ಒಬ್ಬ ನಾಯಕನ ಬಗ್ಗೆ ಫೇಸ್ ಬುಕ್ನಲ್ಲಿ ಪೋಸ್ಟ್ ಹಾಕಿದವರ ಹಾಗೂ ಕಾಮೆಂಟ್ ಮಾಡಿದವರ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಒತ್ತಾಯಿಸಿದೆ.
ಇದನ್ನು ಓದಿ: ವಿಟ್ಲ: ಸೇತುವೆಗೆ ಬೈಕ್ ಡಿಕ್ಕಿ ಹೊಡೆದು 40 ಅಡಿ ಆಳದ ನದಿಗೆ ಬಿದ್ದ ಸವಾರ !
