Home » Congress : ಕಾಂಗ್ರೆಸ್ ರಾಜ್ಯಾಧ್ಯಕ್ಷರ ಬದಲಾವಣೆ- ಇವರೇ ನೋಡಿ ರಾಜ್ಯದ ನೂತನ ಕಾಂಗ್ರೆಸ್ ಸಾರಥಿ !!

Congress : ಕಾಂಗ್ರೆಸ್ ರಾಜ್ಯಾಧ್ಯಕ್ಷರ ಬದಲಾವಣೆ- ಇವರೇ ನೋಡಿ ರಾಜ್ಯದ ನೂತನ ಕಾಂಗ್ರೆಸ್ ಸಾರಥಿ !!

0 comments

Congress : ಮಧ್ಯಪ್ರದೇಶದಶದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲುಂಡ ಕಾರಣ ಅಲ್ಲಿನ ಕಾಂಗ್ರೆಸ್(Congress) ನೇತಾರ, ರಾಜ್ಯಾಧ್ಯಕ್ಷ ಆಗಿದ್ದ ಕಮಲನಾಥ್(Kamalanathan) ಅವರನ್ನು ಪಕ್ಷವು ಅಧ್ಯಕ್ಷ ಸ್ಥಾನದಿಂದ ವಜಾ ಮಾಡಿ ನೂತನ ಅಧ್ಯಕ್ಷರನ್ನು ನೇಮಕ ಮಾಡಿದೆ.

ಹೌದು, ವಿಧಾನಸಭೆಯಲ್ಲಿ(Vidhanasabhe) ಭಾರಿ ಸೋಲು ಅನುಭವಿಸಿ ಮಧ್ಯಪ್ರದೇಶದಲ್ಲಿ ನೆಲಕಚ್ಚಿರುವ ಕಾಂಗ್ರೆಸ್ ಇದೀಗ ಅಲ್ಲಿನ ರಾಜ್ಯಾಧ್ಯಕ್ಷ ಸ್ಥಾನದಿಂದ ಕಮಲನಾಥ್ ಅವರನ್ನು ತೆಗೆದುಹಾಕಿದ್ದು ಜಿತು ಪತ್ವಾರಿ ಅವರನ್ನು ಮಧ್ಯಪ್ರದೇಶ ಪಿಸಿಸಿ ಮುಖ್ಯಸ್ಥರಾಗಿ ನೇಮಕ ಮಾಡಿದೆ. ಜೊತೆಗೆ ಕಾಂಗ್ರೆಸ್ ಸಂಸದ ಉಮಾಗ್ ಸಿಂಘರ್ ಅವರನ್ನು ಮಧ್ಯಪ್ರದೇಶ ವಿಧಾನನ ಸಭೆಯ ಪ್ರತಿಪಕ್ಷ ನಾಯಕರನ್ನಾಗಿ ಮತ್ತು ಹೇಮಂತ್ ಕಟಾರೆ ಅವರನ್ನು ಉಪನಾಯಕರನ್ನಾಗಿ ನೇಮಿಸಿದೆ.

ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಹೇಳಿಕೆ ನೀಡಿದ್ದು, ಗೌರವಾನ್ವಿತ ಕಾಂಗ್ರೆಸ್ ಅಧ್ಯಕ್ಷರು, ಜಿತು ಪತ್ವಾರಿ ಅವರನ್ನು ಮಧ್ಯಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಿಸಿದ್ದಾರೆ. ನಿರ್ಗಮಿತ ಪಿಸಿಸಿ ಅಧ್ಯಕ್ಷ ಕಮಲ್ ನಾಥ್ ಅವರ ಕೊಡುಗೆಯನ್ನು ಪಕ್ಷವು ಶ್ಲಾಘಿಸುತ್ತದೆ ಎಂದು ಹೇಳಿದ್ದಾರೆ.

You may also like

Leave a Comment