Home » Dakshina Kannada ಲೋಕಸಭಾ ಕ್ಷೇತ್ರದಿಂದ ಅರುಣ್‌ ಕುಮಾರ್‌ ಪುತ್ತಿಲ ಬಂಡಾಯ ಸ್ಪರ್ಧೆ

Dakshina Kannada ಲೋಕಸಭಾ ಕ್ಷೇತ್ರದಿಂದ ಅರುಣ್‌ ಕುಮಾರ್‌ ಪುತ್ತಿಲ ಬಂಡಾಯ ಸ್ಪರ್ಧೆ

2 comments
Dakshina Kannada

Mangaluru: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಅರುಣ್‌ ಕುಮಾರ್‌ ಪುತ್ತಿಲ ಅವರು ಕಣಕ್ಕಿಳಿಯುವುದು ಖಚಿತವಾಗಿದೆ. ಈ ಕುರಿತಿ ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: Kartik-Namrata: ಬಿಗ್ ಬಾಸ್ ಕಾರ್ತಿಕ್ ಮತ್ತು ನಮ್ರತಾ ಮದುವೆ? ಸಡನ್ ಆಗಿ ಹಸೆಮಣೆ ಮೇಲೆ ಕಾಣಿಸಿದ ಜೋಡಿ!!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಲಿ ಬಿಜೆಪಿ ಸಂಸದ ನಳಿನ್‌ ಕುಮಾರ್‌ ಕಟೀಲ್‌ ವಿರುದ್ಧ ಆಡಳಿತ ವಿರೋಧಿ ಅಲೆ ಎದ್ದಿದೆ. ಸ್ವಪಕ್ಷದ ಕಾರ್ಯಕರ್ತರೇ ಟೀಕೆ ಮಾಡುತ್ತಿದ್ದಾರೆ. ಹಾಗಾಗಿ ರಾಜ್ಯ ನಾಯಕರು ಮತ್ತು ಹೈಕಮಾಂಡ್‌ ಹೊಸ ಅಭ್ಯರ್ಥಿಯ ಹುಡುಕಾಟದಲ್ಲಿರುವಾಗಲೇ ಅರುಣ್‌ ಕುಮಾರ್‌ ಪುತ್ತಿಲ ಅವರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಗ್ಗೆ ಘೋಷಣೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಚುನಾವಣೆಗಳಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಮಾಡುತ್ತಿದೆ ಎಂದು ಅಧಿಕೃತ ಘೋಷಣೆಯಾಗಿದೆ. ಲೋಕಸಭೆ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಪುತ್ತಿಲ ಅವರು ಸ್ಪರ್ಧಿಸಲಿದ್ದಾರೆ.

You may also like

Leave a Comment