Harish poonja: 24 ಹಿಂದೂ ಕಾರ್ಯಕರ್ತರನ್ನ ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ(Harish poonja) ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ, ಈ ಬೆನ್ನಲ್ಲೆ ಬಿಜೆಪಿ ಶಾಸಕನ ವಿರುದ್ಧ ಪುತ್ತೂರು ನಗರ ಸಭಾ ಸದಸ್ಯ ಮೊಹಮ್ಮದ್ ರಿಯಾಝ್ ದೂರು ಕೂಡಾ ನೀಡಿದ್ದಾರೆ.
ಮೇ. 22ರಂದು ಬಿಜೆಪಿ ವಿಜಯೋತ್ಸವ ಕಾರ್ಯಕ್ರಮವೂ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, 24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ ಸಿದ್ದರಾಮಯ್ಯಗೆ ನೀವು ವೋಟ್ ಕೇಳಿದ್ದೀರಾ ಎಂದು ಕಾಂಗ್ರೆಸ್ ಪರ ಸತ್ಯಜಿತ್ ಸುರತ್ಕಲ್ ಎಂಬ ಹಿಂದೂ ನಾಯಕರಿಗೆ ಪ್ರಶ್ನೆ ಮಾಡುವ ಮೂಲಕ ಹೇಳಿಕೆ ನೀಡಿದ್ದಾರೆ.
ಅಷ್ಟೇ ಅಲ್ಲದೇ ಕಾಂಗ್ರೆಸ್ ನಾಯಕರು ಬಜರಂಗದಳ ಬ್ಯಾನ್ ಮಾಡುತ್ತೇವೆ ಎಂದಿದ್ದರು ಆದ್ರೂ ಕಾಂಗ್ರೆಸ್ ಪರ ವೋಟ್ ಕೇಳಿದ್ದೀರಾ? ನಿಮ್ಮದು ಯಾವ ರೀತಿಯ ಹಿಂದುತ್ವ ಎಂದು ಜನ ಕೇಳುತ್ತಿದ್ದಾರೆ ಎಂದಿದ್ದರುಸಿದ್ದರಾಮಯ್ಯ ವಿರುದ್ಧ ನೀಡಿದ ಒಂದು ಹೇಳಿಕೆ ಇದೀಗ ರಾಜ್ಯ ರಾಜ್ಯಕೀಯದಲ್ಲಿ ಭಾರೀ ದೊಡ್ಡ ವಿವಾದಾತ್ಮಕವಾಗಿ ಸಂಚಲನ ಸೃಷ್ಟಿಸುತ್ತಿದ್ದಂತೆ ಪುತ್ತೂರು ನಗರ ಸಭಾ ಸದಸ್ಯ ಮೊಹಮ್ಮದ್ ರಿಯಾಝ್ ದೂರು ನೀಡಲಾಗಿದೆ.
ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ್ದಾರೆ ಎಂದು ಹರೀಶ್ ಪೂಂಜಾ ಅವರು ಸುಳ್ಳು ಆರೋಪ ಮಾಡಿದ್ದು, ಕೂಡಲೇ ತನಿಖೆಯಾಗಲಿದೆ ಎಂದು ದೂರು ನೀಡಿ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಶಾಸಕ ಹೇಳಿಕೆ ಮುಂದಿನ ದಿನಗಳಲ್ಲಿ ರಾಜಕೀಯ ಬಣ್ಣ ಪಡೆಯುತ್ತಾ ಅನ್ನೋದನ್ನು ಕಾದು ನೋಡಬೇಕಾಗಿದೆ ಅಲ್ಲದೇ ಸಿದ್ದರಾಮಯ್ಯ ಏನು ಹೇಳುತ್ತಾರೆ ಅನ್ನೋದು ತಿಳಿಯಲಿದೆ.
