Home » BJP- JDS: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ!! ನಡ್ಡಾ ಭೇಟಿಯಾದ ದೊಡ್ಡಗೌಡ್ರು!!

BJP- JDS: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ!! ನಡ್ಡಾ ಭೇಟಿಯಾದ ದೊಡ್ಡಗೌಡ್ರು!!

by ಹೊಸಕನ್ನಡ
0 comments
BJP- JDS

BJP- JDS: 2024ರ ಲೋಕಸಭೆ ಚುನಾವಣೆಯಲ್ಲಿ(Parliament election) ಜೆಡಿಎಸ್‌(JDS) ಜತೆ ಮೈತ್ರಿ ಮಾಡಿಕೊಳ್ಳುವ ಕುರಿತು ಬಿಜೆಪಿ(BJP) ಗಂಭೀರ ಚಿಂತನೆ ನಡೆಸಿದೆ ಎಂದು ಬಲ್ಲಮೂಲಗಳ ವರದಿಗಳು ತಿಳಿಸಿವೆ.

ಹೌದು, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ(Assembly election) ಸೋತು ಸುಣ್ಣವಾಗಿರುವ ಜೆಡಿಎಸ್‌ ಹಾಗೂ ಬಿಜೆಪಿ(BJP- JDS) ಲೋಕಸಭಾ ಚುನಾವಣೆಗೂ ಮುನ್ನವೇ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಕಂಡುಬರುತ್ತಿದೆ. ಪ್ರತಿಬಾರಿ 25 ರಿಂದ 30ಕ್ಕೂ ಅಧಿಕ ಸ್ಥಾನಗಳನ್ನು ಪಡೆಯುತ್ತಿದ್ದ ಜೆಡಿಎಸ್‌ 2023ರ ಚುನಾವಣೆಯಲ್ಲಿ ಕೇವಲ 19 ಸ್ಥಾನಗಳನ್ನು ಗಳಿಸಲಷ್ಟೇ ಶಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆ ಮೇಲೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು(H D Devegowda) ಕಣ್ಣಿಟ್ಟಿದ್ದಾರೆ.

ಅಂದಹಾಗೆ ಚುನಾವಣೆಯಲ್ಲಿ ಗೆದ್ದೇ ಗೆಲ್ಲುವ 15 ರಿಂದ 18 ಕ್ಷೇತ್ರಗಳ ಬಗ್ಗೆ ಮಾತ್ರ ಬಿಜೆಪಿ ಹೆಚ್ಚಿನ ಗಮನ ಹರಿಸಲಿದೆ. ಜೆಡಿಎಸ್‌ ಗೆದ್ದೇ ಗೆಲ್ಲಬಹುದಾದ 5–6 ಕ್ಷೇತ್ರಗಳನ್ನು ಆ ಪಕ್ಷಕ್ಕೆ ಬಿಟ್ಟುಕೊಟ್ಟು ಮೈತ್ರಿ ಅಥವಾ ಒಳ ಒಪ್ಪಂದ ಮಾಡಿಕೊಳ್ಳುವ ಬಗ್ಗೆಯೂ ಪಕ್ಷದೊಳಗೆ ಚರ್ಚೆ ನಡೆದಿದೆ. ಇದರಿಂದ ಎರಡೂ ಪಕ್ಷಗಳಿಗೂ ಲಾಭ ಆಗುತ್ತದೆ ಎಂದು ಮೂಲಗಳು ಹೇಳಿವೆ.

2019ರಲ್ಲಿ ಅತ್ಯಧಿಕ ಸ್ಥಾನಗಳನ್ನು (25) ಗೆದ್ದಿದ್ದ ಬಿಜೆಪಿ ಈ ಬಾರಿ ಅಷ್ಟು ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇಲ್ಲ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅತ್ಯಧಿಕ ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದಿರುವುದರಿಂದ ಅದರ ಪರಿಣಾಮ ಲೋಕಸಭಾ ಚುನಾವಣೆ ಮೇಲೂ ಆಗಬಹುದು ಎಂಬ ವಾದವೂ ಕೇಳಿ ಬಂದಿದೆ. 28ರಲ್ಲಿ ಬಿಜೆಪಿ 20 ರಿಂದ 22 ಸ್ಥಾನಗಳನ್ನು ಗೆದ್ದು, ಜೆಡಿಎಸ್‌ಗೆ 8 ಸ್ಥಾನಗಳನ್ನು ಬಿಟ್ಟುಕೊಡಬಹುದು. ಹೀಗಾಗಿ ಜೆಡಿಎಸ್‌ ಒಪ್ಪಿದರೆ ಮೈತ್ರಿ ಲೇಸು ಎಂಬ ಲೆಕ್ಕಾಚಾರ ಬಿಜೆಪಿಯಲ್ಲಿ ನಡೆದಿದೆ.

ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆ ಮೇಲೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಕಣ್ಣಿಟ್ಟಿದ್ದಾರೆ. ಹೀಗಾಗಿ, ಎನ್‌ಡಿಎ(NDA) ಮೈತ್ರಿಕೂಟ ಸೇರಲು ಜೆಡಿಎಸ್‌ ಒಲವು ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗುತ್ತಿದೆ. ಇತ್ತೀಚೆಗೆ ದೆಹಲಿಯಲ್ಲಿ ನಡೆದ ಪಾರ್ಲಿಮೆಂಟ್‌ ಉದ್ಘಾಟನೆ?Parliament inogration) ದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್‌ ನಡ್ಡಾ ಭೇಟಿ ಮಾಡಿದ್ದ ದೇವೇಗೌಡರು, ಹಲವು ವಿಚಾರಗಳನ್ನು ಚರ್ಚೆ ಮಾಡಿದ್ದಾರೆಂಬ ಸುಳಿವು ಸಿಕ್ಕಿದೆ. ಇನ್ನು ರಾಜ್ಯದ ಕೆಲವು ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್‌ ಅಭ್ಯರ್ಥಿಗಳಿಗೆ ಬಿಜೆಪಿ ಬೆಂಬಲವನ್ನೂ ಕೇಳಿದ್ದಾರೆ.

ಅಲ್ಲದೆ ಈ ನಡುವೆ ನನಗೆ 91 ವರ್ಷ ಆಗಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂಬುದಾಗಿ ಭಾವಿಸಿದ್ದೇನೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಮಾರ್ಮಿಕವಾಗಿ ಹೇಳಿದ್ದಾರೆ. ಆದರೆ ಇದರೊಂದಿಗೆ ಪಕ್ಷವನ್ನು ಸಂಘಟಿಸಲು ಹೊಸ ತಂಡವನ್ನು ರಚಿಸಲಾಗುವುದು ಕೂಡ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: Odisha train accident : ಒಡಿಶಾ ರೈಲು ದುರಂತ: ಹಲವು ದಿನ ರಾಶಿ ರಾಶಿ ಶವಗಳ ನಡುವಿದ್ದರು, ಪವಾಡವೆಂಬಂತೆ ಬದುಕಿ ಬಂದ ವ್ಯಕ್ತಿ!!

You may also like

Leave a Comment