Karnataka Gvt : ರಾಜ್ಯದಲ್ಲಿ ದಿನೇ ದಿನೇ ಮರ್ಯಾದೆ ಹತ್ತಿಯ ಪ್ರಕರಣಗಳು ಹೆಚ್ಚುತ್ತಿವೆ. ಇತ್ತೀಚಿಗಷ್ಟೇ ದಾರವಾಡದಲ್ಲಿ ನಡೆದ ಗರ್ಭಿಣಿ ಮಗಳ ಬೀಗರ ಕೊಲೆ ಪ್ರಕರಣವು ಕೂಡ ಜನಸಾಮಾನ್ಯರ ಮನದಲ್ಲಿ ಅಚ್ಚಳಿಯದೆ ಉಳಿದುಬಿಟ್ಟಿದೆ. ಇದರಿಂದ ಎಚ್ಚೆತ್ತುಕೊಂಡ ಸರ್ಕಾರ ಇದೀಗ ಮರ್ಯಾದೆ ಹತ್ಯೆಯನ್ನು ತಡೆಯುವ ನಿಟ್ಟಿನಲ್ಲಿ ಹೊಸ ಕಾನೂನನ್ನು ತರಲು ಚಿಂತನೆ ನಡೆಸಿದೆ.
ಹೌದು, ಧಾರವಾಡದಲ್ಲಿ ಗರ್ಭಿಣಿ ಮಗಳನ್ನು ಕೊಂದ ಪ್ರಕರಣದ ಬೆನ್ನಲ್ಲೇ ರಾಜ್ಯದಲ್ಲಿ ಮರ್ಯಾದಾ ಹತ್ಯೆ (honor killing) ತಡೆ ಸಂಬಂಧ ಕಾನೂನು ಜಾರಿಗೊಳಿಸುವ ವಿಚಾರವನ್ನು ಗಂಭೀರವಾಗಿ ಪರಿಗಣಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮರ್ಯಾದೆ ಹತ್ಯೆ ವಿರೋಧಿ ಕಾನೂನು ಜಾರಿಗೆ ತರಬೇಕು ಅಂತ ವಿವಿಧ ದಲಿತಪರ ಸಂಘಟನೆಗಳು ಆಗ್ರಹಿಸಿದ್ದವು. ಆದರೆ ಇದೀಗ ರಾಜ್ಯ ಸರ್ಕಾರ ಕೂಡ ಮರ್ಯಾದೆ ಹತ್ಯೆ ವಿರೋಧಿ ಕಾನೂನು ಜಾರಿಗೊಳಿಸಲು ಚಿಂತನೆ ನಡೆಸಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಕಳೆದ ರಾತ್ರಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಮರ್ಯಾದೆ ಹತ್ಯೆ ಕಾನೂನು ಜಾರಿಗೆ ತರಲು ಚಿಂತನೆ ನಡೆಸಲಾಗಿದೆ. ಕೇವಲ ಕಾನೂನು ಜಾರಿಗೊಳಿಸಿದರೆ ಸಾಲದು, ಅದನ್ನು ಅನುಷ್ಠಾನಕ್ಕೆ ತರುವ ಕೆಲಸವಾಗಬೇಕು ಅಂತ ಹೇಳಿದ್ದಾರೆ.
