Nikhil Kumaraswamy:ಬೆಂಗಳೂರು : ಕರ್ನಾಟಕ ವಿಧಾನ ಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಬೆನ್ನಲ್ಲೆ ಯುವ ಜಾತ್ಯತೀತ ಜನತಾದಳ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ.
ರಾಜೀನಾಮೆ ನೀಡಿದ ಬೆನ್ನಲ್ಲೆ ನಿಖಿಲ್ ಕುಮಾರಸ್ವಾಮಿ ಮಾಧ್ಯಮಗಳೊಂದಿಗೆ ಮಾತನಾಡಿ, ವಿಧಾನಸಭೆ ಚುನಾವಣೆಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಸ್ಥಾನ ಗಳಿಸುವಲ್ಲಿ ವಿಫಲವಾದ ಹಿನ್ನೆಲೆ ಜೆಡಿಎಸ್ ಪಕ್ಷ ಸೋತಿದೆ ಇದರಿಂದ ನನಗೆ ತುಂಬಾನೆ ಬೇಸರವಾಗಿದೆ.
ಈ ನಿಟ್ಟಿನಲ್ಲಿ ಯುವ ಜೆಡಿಎಸ್ ಅಧ್ಯಕ್ಷತೆ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸುತ್ತೇನೆ. ಇದಕ್ಕೆ ಜೆಡಿಎಸ್ ಹಿರಿಯ ನಾಯಕರು ಸಮ್ಮತಿ ನೀಡುತ್ತಾರೆ ಎಂದು ಭಾವಿಸುವೆ. ಅದ್ರೆ ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಬಲಪಡಿಸುವಲ್ಲಿ ಹಿಂದೇಟು ಹಾಕೋದಿಲ್ಲ, ಇನ್ನಷ್ಟು ಬಲಪಡಿಸಲು ಮುಂದಾಗುವೆ. ಪಕ್ಷ ಕಟ್ಟುವ ನಿಟ್ಟಿನಲ್ಲಿ ಪಕ್ಷದ ಪದಾಧಿಕಾರಿಗಳನ್ನು ಬದಲಾವಣೆ ಮಾಡುವ ಬಗ್ಗೆ ಮಹತ್ವದ ಚರ್ಚೆ ಸಮಲೋಚನೆ ನಡೆಸಲಾಗುತ್ತಿದೆ. ಮತ್ತಷ್ಟು ಪಕ್ಷಕ್ಕಾಗಿ ಕರ್ತವ್ಯವನ್ನು ನಿರ್ವಹಿಸಬೇಕಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ಶ್ರದ್ಧಾ ವಾಕರ್ ಹತ್ಯೆ ಮಾದರಿಯಲ್ಲೇ ಮಹಿಳೆ ಹತ್ಯೆಗೈದು ಪೀಸ್ ಪೀಸ್ ಮಾಡಿದ ಕಸದ ತೊಟ್ಟಿಗೆ ಹಾಕಿದ ವ್ಯಕ್ತಿಯ ಬಂಧನ
