Home » ನೂಪುರ್ ಶರ್ಮಾರನ್ನು ಬಿಜೆಪಿ ಮುಂದಿನ ದೆಹಲಿ ಸಿಎಂ ಅಭ್ಯರ್ಥಿ ಎಂದು ಘೋಷಿಸುತ್ತದೆ !! -ಓವೈಸಿ

ನೂಪುರ್ ಶರ್ಮಾರನ್ನು ಬಿಜೆಪಿ ಮುಂದಿನ ದೆಹಲಿ ಸಿಎಂ ಅಭ್ಯರ್ಥಿ ಎಂದು ಘೋಷಿಸುತ್ತದೆ !! -ಓವೈಸಿ

0 comments

ಬಿಜೆಪಿಯಿಂದ ನೂಪುರ್ ಶರ್ಮಾ ಅವರನ್ನು ಮುಂದಿನ ದಿನಗಳಲ್ಲಿ ದೊಡ್ಡ ನಾಯಕಿಯಾಗಿ ಬಿಂಬಿಸಲಾಗುತ್ತದೆ. ಅಷ್ಟೇ ಅಲ್ಲದೇ ದೆಹಲಿಯಲ್ಲಿ ಸಿಎಂ ಅಭ್ಯರ್ಥಿಯನ್ನಾಗಿಯೂ ಘೋಷಿಸಬಹುದು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೂಪುರ್ ಶರ್ಮಾ ಅವರನ್ನು ಬಿಜೆಪಿ ರಕ್ಷಿಸುತ್ತಿದೆ. ಇದರ ಜೊತೆಗೆ ಮುಂಬರುವ 6-7 ತಿಂಗಳಲ್ಲಿ ನೂಪುರ್ ಶರ್ಮಾ ಅವರನ್ನು ದೊಡ್ಡ ನಾಯಕರನ್ನಾಗಿ ಮಾಡಲಾಗುವುದು ಎಂದು ಕಿಡಿಕಾರಿದರು.

ಪ್ರವಾದಿ ಮೊಹಮ್ಮದ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯನ್ನು ನೀಡಿದ್ದಕ್ಕಾಗಿ ಅಮಾನತುಗೊಂಡಿರುವ ಬಿಜೆಪಿ ವಕ್ತಾರ ನೂಪುರ್ ಶರ್ಮಾ ಅವರನ್ನು ಬಂಧಿಸಿ ಭಾರತದ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರಧಾನಿ ಮೋದಿಗೆ ಪತ್ರ ಬರೆದು ಮನವಿ ಮಾಡಿದ್ದರೂ, ಅವರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳದೇ ಮೌನ ವಹಿಸಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಗುಡುಗಿದ್ದಾರೆ.

You may also like

Leave a Comment