Home » Jagadish shetter: ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಸೇರ್ಪಡೆ ವಿಚಾರ?! ಜಗದೀಶ್ ಶೆಟ್ಟರ್ ಕೊಟ್ರು ಬಿಗ್ ಅಪ್ಡೇಟ್ !!

Jagadish shetter: ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಸೇರ್ಪಡೆ ವಿಚಾರ?! ಜಗದೀಶ್ ಶೆಟ್ಟರ್ ಕೊಟ್ರು ಬಿಗ್ ಅಪ್ಡೇಟ್ !!

0 comments
Jagadish shetter

Jagadish shetter: ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಕಾಂಗ್ರೆಸ್ ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಲೋಕಸಭಾ ಚುನಾವಣೆಯ ವೇಳೆ ಮರಳಿ ಬಿಜೆಪಿ ಸೇರುತ್ತಾರೆ ಎಂಬ ಸುದ್ದಿ ಕೇಳಿಬಂದಿತ್ತು. ಇದೀಗ ಈ ಬಗ್ಗೆ ಜಗದೀಶ್ ಶೆಟ್ಟರ್(Jagadish shetter) ಮಹತ್ವದ ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ(Hubballi) ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್ ಅವರು ನಾನು ಬಿಜೆಪಿಗೆ ಘರ್‌ ವಾಪ್ಸಿ ಪ್ರಶ್ನೆಯೇ ಇಲ್ಲ, ನಾನು ಯಾವುದೇ ಕಾರಣಕ್ಕೂ ಮತ್ತೆ ಬಿಜೆಪಿಗೆ ಹೋಗುವುದಿಲ್ಲ ಎಂದು ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: Parliment attack: ಪಾರ್ಲಿಮೆಂಟ್ ದಾಳಿ ಪ್ರಕರಣಕ್ಕೆ ರೋಚಕ ಟ್ವಿಸ್ಟ್- ಆರೋಪಿ ಮಂಪರು ಪರೀಕ್ಷೆಯಲ್ಲಿ ಬಯಲಾಯ್ತು ಸ್ಪೋಟಕ ಸತ್ಯ!!

ಅಲ್ಲದೆ ನನ್ನನ್ನು ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳಲು ಹಲವು ನಾಯಕರು ಪ್ರಯತ್ನಿಸುತ್ತಿದ್ದಾರೆ. ಯಾರು ಏನೇ ಪ್ರಯತ್ನ ಮಾಡಿದ್ರೂ ನಾನು ಬಿಜೆಪಿಗೆ ವಾಪಸ್‌ ಆಗುವುದಿಲ್ಲ. ಅಲ್ಲಿ

ನನಗಾಗಿರೋ ಅಪಮಾನವನ್ನು ನಾನು ಇನ್ನೂ ಮರೆತಿಲ್ಲ, ಯಾವುದೇ ಕಾರಣಕ್ಕು ನಾನು ಬಿಜೆಪಿಗೆ ಮತ್ತೆ ವಾಪಸ್‌ ಆಗುವುದಿಲ್ಲ. ನಾನು ಬಿಜೆಪಿ ತೊರೆದ ನಂತರ ಆದ ಹಾನಿ ಬಗ್ಗೆ ಮನವರಿಕೆ ಆಗಿದೆ ಎಂದು ಹೇಳಿದ್ದಾರೆ.

ಬಿಜೆಪಿಗೆ ಆಗಿರುವ ಹಾನಿಯಿಂದ ಕೆಲವು ಬಿಜೆಪಿ ನಾಯಕರು ನನ್ನನ್ನು ವಾಪಸ್‌ ಕರೆಸಲು ಯತ್ನಿಸುತ್ತಿದ್ದಾರೆ. ವಾಪಸ್‌ ಕರೆತರುವಂತೆ ಒತ್ತಡ ಹಾಕುತ್ತಿದ್ದಾರೆ.

You may also like

Leave a Comment