Home » Parliment election: ಬಿಜೆಪಿಯ ಪ್ರಣಾಳಿಕೆ ‘ಸಂಕಲ್ಪ ಪತ್ರ ‘ ಬಿಡುಗಡೆ !!

Parliment election: ಬಿಜೆಪಿಯ ಪ್ರಣಾಳಿಕೆ ‘ಸಂಕಲ್ಪ ಪತ್ರ ‘ ಬಿಡುಗಡೆ !!

2 comments
Parliament Election

Parliment Election : ಲೋಕಸಭಾ ಚುನಾವಣೆಗೆ ಹಲವು ಭರವಸೆಗಳನ್ನೊಳಗೊಂಡ ಬಿಜೆಪಿಯು ಪ್ರಣಾಳಿಕೆ(BJP Pranalike) ಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ'(Sankalpa Patra) ಎಂಡ ಹೆಸರಿನಲ್ಲಿ ಬಿಜೆಪಿ ತನ್ನ ಈ ಪ್ರಣಾಳಿಕೆ ಬಿಡುಗಡೆ ಮಾಡಿರುವುದು ಗಮನ ಸೆಳೆದಿದೆ.

ಇದನ್ನೂ ಓದಿ: Intercourse: ಒಂದು ವಾರದಲ್ಲಿ ಎಷ್ಟು ಬಾರಿ ಸಂಭೋಗಿಸಬೇಕು? : ಹಗಲಿನಲ್ಲಿ ಸಂಭೋಗ ಮಾಡುವುದು ಉತ್ತಮವೇ?

ದೆಹಲಿಯ ಬಿಜೆಪಿ(BJP) ಕಛೇರಿಯಲ್ಲಿ ಬಿಜೆಪಿ ನಾಯಕರ ಸಮ್ಮುಖದಲ್ಲಿ, ಅಂಬೇಡ್ಕರ್ ಜಯಂತಿಯ ವಿಶೇಷ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ(PM Modi) ಯವರು ಈ ಸಂಕಲ್ಪ ಪತ್ರವನ್ನು ಬಿಡುಗಡೆ ಮಾಡಿದ್ದಾರೆ. ಜೊತೆಗೆ ಪ್ರತಿ ಕ್ಷಣವೂ ದೇಶಕ್ಕಾಗಿ.. 24*7 For 2047 ಚುನಾವಣಾ ಘೋಷವಾಕ್ಯದೊಂದಿಗೆ ಬಿಜೆಪಿ ಇಂದು ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿತು. ಇದೇ ವೇಳೆ ಪ್ರಧಾನಿ ಮೋದಿ ಅವರ 10 ವರ್ಷಗಳ ಸಾಧನೆ ಸಾಕ್ಷ್ಯಚಿತ್ರ ಪ್ರದರ್ಶನ ಮಾಡಲಾಯಿತು.

ಇದನ್ನೂ ಓದಿ: Idli: ಇಡ್ಲಿ ಹುಟ್ಟಿದ್ದು ಭಾರತದಲ್ಲಿ ಅಲ್ಲ : ಅಸಲಿಗೆ ಈ ಖಾದ್ಯ ಯಾವ ದೇಶದ್ದು ಗೊತ್ತಾ..?

ಬಿಜೆಪಿ ಪ್ರಣಾಳಿಕೆಯ ಪ್ರಮುಖ ಅಂಶಗಳು

• 70 ವರ್ಷ ದಾಟಿದವರಿಗಾಗಿ ಆಯುಷ್ಮಾನ್‌ ಭಾರತ್‌ ಯೋಜನೆ ವಿಸ್ತರಣೆ, ಎಲ್ಲರಿಗೂ ಉಚಿತ ಚಿಕಿತ್ಸೆ

• ಜನೌಷಧಿ ಕೇಂದ್ರಗಳಲ್ಲಿ ಶೇ.80ರಷ್ಟು ರಿಯಾಯಿತಿಯೊಂದಿಗೆ ಔಷಧ ವಿತರಣೆ

• ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣ

• ಪೈಪ್‌ಲೈನ್‌ ಮೂಲಕ ಅಡುಗೆ ಅನಿಲ ಪೂರೈಕೆ

• ಕೋಟ್ಯಂತರ ಕುಟುಂಬಗಳಿಗೆ ಸೋಲಾರ್‌ ಮೂಲಕ ಉಚಿತವಾಗಿ ವಿದ್ಯುತ್‌ ಪೂರೈಕೆ

• ಮುದ್ರಾ ಯೋಜನೆ ಅಡಿಯಲ್ಲಿ ಸಿಗುವ ಸಾಲದ ಮೊತ್ತ 20 ಲಕ್ಷ ರೂ.ಗೆ ಏರಿಕೆ

• ಅಮೃತ್‌ ಭಾರತ್‌, ವಂದೇ ಭಾರತ್‌ ರೈಲುಗಳ ಸಂಖ್ಯೆ ಹೆಚ್ಚಳ

• ಮಂಗಳಮುಖಿಯರಿಗೂ ಆಯುಷ್ಮಾನ್‌ ಭಾರತ್‌ ಯೋಜನೆ ಅಡಿ ಉಚಿತ ಚಿಕಿತ್ಸೆ

• 10 ಕೋಟಿ ಮಹಿಳೆಯರಿಗೆ ಉದ್ಯೋಗ, ಉದ್ಯಮ ಕುರಿತು ಕೌಶಲ ತರಬೇತಿ

• ಮೂರು ಕೋಟಿ ಮಹಿಳೆಯರಿಗೆ ಲಕ್‌ಪತಿ ದೀದಿ ಯೋಜನೆಯ ಗ್ಯಾರಂಟಿ

• ರೈತರಿಗೆ ಪಿಎಂ ಕಿಸಾನ್‌ ಯೋಜನೆ ಅಡಿಯಲ್ಲಿ ಹಣ ವರ್ಗಾವಣೆ ಮುಂದುವರಿಕೆ

• ದೇಶಾದ್ಯಂತ ಡೇರಿ ಸಹಕಾರ ಸಂಘಗಳನ್ನು ಹೆಚ್ಚಿಸಲಾಗುವುದು

• ಕ್ರೀಡೆಯಲ್ಲಿ ಸ್ತ್ರೀಯರ ಪ್ರಾತಿನಿಧ್ಯ ಹೆಚ್ಚಿಸಲು ಹೊಸ ಯೋಜನೆ

• ತಮಿಳು ಭಾಷೆಯ ವೈಶಿಷ್ಟ್ಯ ಸಾರಲು ಆದ್ಯತೆ

• ದೇಶಾದ್ಯಂತ ಪ್ರವಾಸೋದ್ಯಮಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವುದು

ಬಿಜೆಪಿಯ ಈ ಪ್ರಣಾಳಿಕೆ ಗಮನಿಸಿದಾಗ ಬಡವರು, ಯುವಕರು, ರೈತರು, ಮಹಿಳೆಯರು, ವಂಚಿತರು, ಹಿರಿಯ ನಾಗರಿಕರು ಸೇರಿ ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ ತತ್ವದಲ್ಲಿ ಪ್ರಣಾಳಿಕೆ ತಯಾರಿಸಲಾಗಿದೆ ಎಂದು ಹೇಳಬಹುದು. ರೈತರು, ಬಡವರು, ಮಹಿಳೆಯರಿಗೆ ಮೋದಿ ಭರ್ಜರಿ ಕೊಡುಗೆ ಘೋಷಿಸಿದ್ದಾರೆ.

You may also like

Leave a Comment