Chaitra Kundapura: ವಂಚನೆ ಪ್ರಕರಣದಲ್ಲಿ ಬಂಧಿಯಾಗಿ, ಸಿಸಿಬಿ ಬಂಧನದಲ್ಲಿರುವ ಸಾಮಾಜಿಕ ಹೋರಾಟಗಾರ್ತಿ, ಚೈತ್ರಾ ಕುಂದಾಪುರ (Chaitra Kundapura) ತಮ್ಮ ಮೊದಲ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಸ್ವಾಮೀಜಿಗಳು ಸಿಕ್ಕಿ ಹಾಕಿಕೊಳ್ಳಲಿ. ಎಲ್ಲಾ ಸತ್ಯ ಗೊತ್ತಾಗುತ್ತೆ ಸರ್. ಸ್ವಾಮೀಜಿ ಸಿಕ್ಕಿ ಹಾಕಿಕೊಂಡ ನಂತರ ದೊಡ್ಡ ದೊಡ್ಡವರ ಹೆಸರುಗಳು ಹೊರ ಬರುತ್ತವೆ. ಇಂದಿರಾ ಕ್ಯಾಂಟೀನ್ ಬಿಲ್ ಪೆಡ್ಡಿಂಗ್ ಇರೋ ಕಾರಣ ಈ ಷಡ್ಯಂತ್ರ ರಚನೆಯಾಗಿದೆ. ಎ1 ಆರೋಪಿ ನಾನೇ ಆಗಿರಬಹುದು. ಸ್ವಾಮೀಜಿ ಸಿಕ್ಕ ನಂತರವೇ ಎಲ್ಲವೂ ಗೊತ್ತಾಗಲಿದೆ ಎಂದು ನ್ಯೂಸ್ 18 ಕನ್ನಡ ಮಾಧ್ಯಮವೊಂದು ಪ್ರಕಟ ಮಾಡಿದೆ.
ಹೀಗೆ ಹೇಳುತ್ತಿದ್ದ ಚೈತ್ರಾಳನ್ನು ಪೊಲೀಸರು ತಮ್ಮ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ ಎಂದು ವರದಿಯಾಗಿದೆ.
ಉದ್ಯಮಿಯೊಬ್ಬರಿಗೆ ಏಳು ಕೋಟಿ ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಸೇರಿ ಆರು ಆರೋಪಿಗಳನ್ನು ಸೆ.23ರವರೆಗೆ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ.
