Nalin Kumar Kateel: ನಳೀನ್ ಕುಮಾರ್ ಕಟೀಲ್ (Nalin Kumar Kateel) ಅವರು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ವಿಚಾರ ಈಗಾಗಲೇ ಸಾಕಷ್ಟು ಸುದ್ದಿಯಾಗಿತ್ತು. ಇದೀಗ ಈ ವಿಚಾರ ಸುಳ್ಳು. ನಳಿನ್‌ಕುಮಾರ್ ಕಟೀಲ್ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ ಎಂದು ಸ್ಪಷ್ಟನೆ ಸಿಕ್ಕಿದೆ.
ಶನಿವಾರ ಬಳ್ಳಾರಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲ್ ಈಗಾಗಲೇ ನನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಎರಡು ವರ್ಷದ ಅವಧಿ ಮುಗಿದಿದೆ. ನಾನು ರಾಜೀನಾಮೆಯನ್ನೂ ನೀಡಿದ್ದೇನೆ. ಲಿಖಿತ ಹಾಗೂ ಮೌಖಿಕವಾಗಿ ರಾಜೀನಾಮೆ ಸಲ್ಲಿಕೆ ಮಾಡಿದ್ದೇನೆ ಎಂದು ಹೇಳಿದ್ದರು. ಈ ಸುದ್ದಿ ವೈರಲ್ ಆದ ಬೆನ್ನಲ್ಲೆ ರಾಜ್ಯಾಧ್ಯಕ್ಷರ ಹೆಸರಲ್ಲಿ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ ಪ್ರಕಟಣೆ ನೀಡಿದ್ದು ನಳೀನ್ ಕುಮಾರ್ ರಾಜಿನಾಮೆ ನೀಡಿಲ್ಲ ಎಂದು ಹೇಳಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷರ ನೇಮಕದ ಬಗ್ಗೆ ಪಕ್ಷವು ಸೂಕ್ತ ಸಂದರ್ಭದಲ್ಲಿ ಸರಿಯಾರ ನಿರ್ಧಾರ ತೆಗೆದುಕೊಳ್ಳುತ್ತದೆ. ನಾನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಸುದ್ದಿ ಬಿತ್ತರಿಸಲಾಗುತ್ತಿದೆ ಎಂದು ನಳಿನ್ ಕುಮಾರ್ ಹೆಸರಿನಲ್ಲಿ ಮಾಧ್ಯಮ ಸಂಚಾಲಕ ಪ್ರಕಟಣೆ ನೀಡಿದ್ದಾರೆ.
