Parliment election: ಮುಂಬರುವ ಲೋಕಸಭಾ ಚುನಾವಣೆಗೆ ಎಲ್ಲಾ ಪಕ್ಷಗಳು ತಯಾರಿ ನಡೆಸಿವೆ. ಈಗಾಗಲೇ ಅಭ್ಯರ್ಥಿಗಳ ಆಯ್ಕೆಯನ್ನು ತೆರೆಮರೆಯಲ್ಲಿ ನಡೆಸಿವೆ. ಇದೀಗ ಬಿಜೆಪಿಗೆ ರಾಜ್ಯ ಬಿಜೆಪಿಗೆ ಹೊಸ ಸಾರಥಿ ಆಯ್ಕೆಯಾಗಿದ್ದು ‘ಕಮಲ’ ಪಾಳಯದಲ್ಲೂ ಎಲ್ಲಾ ಸಕಲ ಸಿದ್ಧತೆಗಳು ನಡೆಯುತ್ತಿವೆ. ಈ ಬೆನ್ನಲ್ಲೇ ರಾಜ್ಯದ ಈ ಹಾಲಿ ಬಿಜೆಪಿ ಸಂಸದರಿಗೆ ಮುಂದಿನ ಲೋಕಸಭಾ ಟಿಕೆಟ್(Parliament election) ನೀಡುವುದಿಲ್ಲ ಎಂಬ ಸುದ್ದಿ ಎಂದು ಜೋರಾಗಿ ಸದ್ದುಮಾಡುತ್ತಿದೆ.
ಹೌದು, ಬಿಜೆಪಿ ಹೈಕಮಾಂಡ್ ಈಗಾಗಲೇ ಕರ್ನಾಟಕದಲ್ಲಿರುವ ತನ್ನ ಹಾಲಿ ಸಂಸದರಲ್ಲಿ ಕೆಲವರಿಗೆ ಟಿಕೆಟ್ ನೀಡದಿರಲು ನಿರ್ಧರಿಸಿದೆ ಎನ್ನಲಾಗಿದ್ದು, ವಯೋಮಿತಿಯ ಆಧಾರದ ಮೇಲೆ ಹಾಗೂ ಯುವಕರನ್ನ ಸೆಳೆಯುವ ನಿಟ್ಟಿನಲ್ಲಿ ಕೆಲವು ಹಾಲಿ ಸಂಸದರು ಟಿಕೆಟ್ ನಿಂದ ವಂಚಿತರಾಗಲಿದ್ದಾರೆ ಎನ್ನಲಾಗಿದೆ.
ಯಾರಿಗೆಲ್ಲಾ ಕೈತಪ್ಪಲಿದೆ ಟಿಕೆಟ್?
• ಬೆಂಗಳೂರು ಉತ್ತರ ಕ್ಷೇತ್ರದ ಸಂಸದ, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಅವರು ಈಗಾಗಲೇ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
• ಚಾಮರಾಜನಗರದ ಸಂಸದ ಶ್ರೀನಿವಾಸ ಪ್ರಸಾದ್ ಅವರು ಮುಂದಿನ ಮಾರ್ಚ್ ನಲ್ಲಿ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಹೇಳಿದ್ದಾರೆ.
• ಚಿಕ್ಕಬಳ್ಳಾಪುರದ ಸಂಸದ ಬಚ್ಚೇಗೌಡ, ಕೋಲಾರ ಸಂಸದ ಮುನಿಸ್ವಾಮಿ, ವಿಜಯಪುರ ಸಂಸದ ರಮೇಶ್ ಜಿಗಜಿಣಗಿ, ತುಮಕೂರು ಸಂಸದ ಜಿ.ಎಸ್. ಬಸವರಾಜು, ಕೊಪ್ಪಳದ ಸಂಸದ ಸಂಗಣ್ಣ ಕರಡಿ, ದಾವಣಗೆರೆಯ ಸಂಸದ ಜಿ.ಎಂ. ಸಿದ್ದೇಶ್ವರ ಅವರು ಸೇರಿದಂತೆ ಹಲವು ನಾಯಕರಿಗೆ ಈ ಬಾರೀ ಟಿಕೆಟ್ ನೀಡದಿರಲು ನಿರ್ಧರಿಸಿದೆ ಎನ್ನಲಾಗಿದೆ.
• ನಳೀನ್ ಕುಮಾರ್ ಕಟೀಲ್ ಅವರಿಗೂ ಈ ಬಾರಿ ಬಿಜೆಪಿ ಟಿಕೆಟ್ ಸಿಗುವುದು ಅನುಮಾನ ಎಂದು ಹೇಳಲಾಗಿದೆ.
• ಅನಾರೋಗ್ಯದ ಕಾರಣದಿಂದಾಗಿ ಪಕ್ಷದ ಕಾರ್ಯಚಟುವಟಿಕೆಯಿಂದ ಅಂತರವನ್ನ ಕಾಯ್ದ ಕೊಡಿರುವ ಉತ್ತರ ಕನ್ನಡ ಕ್ಷೇತ್ರದ ಸಂಸದ ಅನಂತ್ ಕುಮಾರ್ ಹೆಗ್ಡೆಯವರಿಗೂ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ.
ಇದನ್ನು ಓದಿ: Bihar Crime News: ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದ ಗ್ಯಾಂಗ್ ಸ್ಟರ್! ಜೀವ ಉಳಿಸೋ ಡಾಕ್ಟರ್ ಮಾಡಿದ್ದೇನು ಗೊತ್ತೇ?
