Ayodhya Rama Mandir: ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ಅದ್ಧೂರಿಯಾಗಿ ನಡೆಯುವಂತೆ ನೋಡಿಕೊಳ್ಳಲು ಎಲ್ಲಾ ಸಿದ್ಧತೆಗಳನ್ನು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾಡಿಕೊಳ್ಳುತ್ತಿದ್ದಾರೆ. ಭಕ್ತರು ದೇವಾಲಯವನ್ನು ತಲುಪಲು ಸಹಾಯ ಮಾಡಲು ಮೂರು ರಾಮಪಥಗಳ ಕೆಲಸ ನಡೆಯುತ್ತಿದೆ.
ಈ ನಡುವೆ ಭಾರತ್ ಜೋಡೋ ಯಾತ್ರೆಯ ಸಂಯೋಜಕ ಮತ್ತು ರಾಜೀವ್ ಗಾಂಧಿ ಪ್ರತಿಷ್ಠಾನದ ಸಿಇಒ ವಿಜಯ್ ಮಹಾಜನ್ ಅವರು ಸ್ಥಳೀಯ ಕಾಂಗ್ರೆಸ್ ಮುಖಂಡರೊಂದಿಗೆ ಶ್ರೀರಾಮ ಮಂದಿರದ (Ayodhya Rama Mandir) ಮುಖ್ಯ ಅರ್ಚಕರನ್ನು ಭೇಟಿ ಮಾಡಿರುವ ಮಾಹಿತಿ ಬೆಳಕಿಗೆ ಬಂದಿದೆ. ಮಾಹಿತಿ ಪ್ರಕಾರ ಈ ಸಭೆ ಒಂದು ವಾರದ ಹಿಂದೆ ನಡೆದಿದೆ, ಸಭೆಯಲ್ಲಿ ರಾಹುಲ್ ಗಾಂಧಿ ರಾಮಜನ್ಮಭೂಮಿ ಭೇಟಿಯ ಕುರಿತು ಚರ್ಚೆಗಳು ನಡೆದಿದೆ.
ಸದ್ಯ ದೇವಸ್ಥಾನದ ಗರ್ಭಗುಡಿಯ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ರಾಮಮಂದಿರ ನಿರ್ಮಾಣದ ಹೊಸ ಚಿತ್ರಗಳನ್ನು ಬಿಡುಗಡೆ ಮಾಡಿದೆ. ಮೊದಲ ಮಹಡಿಯಲ್ಲಿ ಶೇ 50ರಷ್ಟು ಪಿಲ್ಲರ್ ಕಾಮಗಾರಿ ಪೂರ್ಣಗೊಂಡಿದೆ. ನವೆಂಬರ್ ವೇಳೆಗೆ ನೆಲಮಹಡಿ ಸಂಪೂರ್ಣವಾಗಿ ಸಿದ್ಧವಾಗಲಿದೆ. ಜನವರಿಯಲ್ಲಿ ರಾಮಲಾಲರನ್ನು ಗರ್ಭಗುಡಿಯಲ್ಲಿ ಕೂರಿಸಲಾಗುವುದು ಎಂದು ಈ ಮೊದಲೇ ಹೇಳಲಾಗಿತ್ತು.
ಸದ್ಯ ಆಚಾರ್ಯ ಸತ್ಯೇಂದ್ರ ದಾಸ್ ಅವರು ಮಾತನಾಡಿ, ರಾಮ ಮಂದಿರಕ್ಕೆ ಭೇಟಿ ನೀಡಿ ಅವರ ಆಶೀರ್ವಾದ ಪಡೆಯುವ ಹಕ್ಕು ಪ್ರತಿಯೊಬ್ಬರಿಗೂ ಇದೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ರಾಮಲಲ್ಲಾ ಅವರನ್ನು ಭೇಟಿ ಮಾಡಲು ಬಯಸಿದರೆ, ಅವರಿಗೆ ಸ್ವಾಗತ. ಆದರೆ, ಸ್ಥಳೀಯ ಕಾಂಗ್ರೆಸ್ಸಿಗರು ಅವರ ಭೇಟಿಯ ದಿನಾಂಕವನ್ನು ದೃಢಪಡಿಸಿಲ್ಲ ಎಂದು ತಿಳಿಸಿದ್ದಾರೆ.
ಸದ್ಯ ರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಜನವರಿ 21ರಿಂದ 23ರ ನಡುವೆ ನಡೆಯಲಿರುವ ರಾಮಮಂದಿರದ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಭಾರಿ ಪ್ರಮಾಣದಲ್ಲಿ ವ್ಯವಸ್ಥೆ ಮಾಡಲಾಗುತ್ತಿದೆ.
ಇತ್ತೀಚೆಗೆ, ವಿಶ್ವ ಹಿಂದೂ ಪರಿಷತ್, ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಮತ್ತು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸದಸ್ಯರು ಸಮರ್ಪಣಾ ಸಮಾರಂಭದ ವಿಸ್ತೃತ ಯೋಜನೆಯನ್ನು ರೂಪಿಸಲು ಸಭೆ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳುವ ಸಾಧ್ಯತೆಯಿದೆ.
ಇದನ್ನೂ ಓದಿ: ಈ ಬ್ಯಾಂಕ್ ನಲ್ಲಿ ಲೋನ್ ಪಡೆದವರಿಗೆ ಭರ್ಜರಿ ಗುಡ್ ನ್ಯೂಸ್ | ಹಬ್ಬದ ಪ್ರಯುಕ್ತ ಸಿಗ್ತಿದೆ ಸಾವಿರ-ಸಾವಿರ ಉಳಿತಾಯದ ಬಿಗ್ ಆಪರ್ !!
