Home » AT Ramaswamy : ಜೆಡಿಎಸ್ ಹಿರಿಯ ಶಾಸಕ ಎ.ಟಿ ರಾಮಸ್ವಾಮಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆ

AT Ramaswamy : ಜೆಡಿಎಸ್ ಹಿರಿಯ ಶಾಸಕ ಎ.ಟಿ ರಾಮಸ್ವಾಮಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆ

1 comment
 JDS  MLA AT Ramaswamy

JDS  MLA AT Ramaswamy : ನವದೆಹಲಿ: ಅರಕಲಗೂಡು ಕ್ಷೇತ್ರದ ಜೆಡಿಎಸ್ ಹಿರಿಯ ಶಾಸಕ ಎ.ಟಿ.ರಾಮಸ್ವಾಮಿ ( JDS  MLA AT Ramaswamy), ಜೆಡಿಎಸ್ ಗೆ ಗುಡ್ ಬೈ ಹೇಳಿ, ಇಂದು ದೆಹಲಿಯ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಅರಕಲಗೂಡು ಕ್ಷೇತ್ರದ ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಅವರು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರ ಸಮ್ಮುಖದಲ್ಲಿ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಇಂದು ಅಧಿಕೃತವಾಗಿ ಬಿಜೆಪಿ ಭಾವುಟ ಹಿಡಿಯುವ ಮೂಲಕ ಬಿಜೆಪಿಗೆ ಸೇರ್ಪಡೆಯಾದರು.

ದಿಢೀರ್ ಬಿಜೆಪಿ ನಾಯಕರೊಂದಿಗೆ ಇಂದು ಜೆಡಿಎಸ್ ಗೆ ಗುಡ್ ಬೈ ಹೇಳಿದ್ದಂತ ಶಾಸಕ ಎ.ಟಿ ರಾಮಸ್ವಾಮಿ ದೆಹಲಿಗೆ ತೆರಳಿದ್ದರು. ಬಿಜೆಪಿ ಹೈಕಮಾಂಡ್ ಭೇಟಿಯಾಗಿ, ಟಿಕೆಟ್ ಸೇರಿದಂತೆ ಪಕ್ಷ ಸೇರ್ಪಡೆಗೂ ಚರ್ಚಿಸಿದ್ದರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಜೆಡಿಎಸ್ ಹಿರಿಯ ನಾಯಕ ಎ.ಟಿ.ರಾಮಸ್ವಾಮಿ ಬಿಜೆಪಿ ಸೇರಿದ್ದರಿಂದ ಪಕ್ಷದ ಬಲ ವೃದ್ಧಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

ರಾಮಸ್ವಾಮಿ ಮತ್ತು ಅವರ ಬೆಂಬಲಿಗರು ಬಿಜೆಪಿಗೆ ಸೇರಿದ್ದು, ಅವರ ಸೇರ್ಪಡೆಯಿಂದಾಗಿ ಪಕ್ಷದ ಬಲವರ್ಧನೆಯಾಗಿದೆ. ಅವರನ್ನು ಪಕ್ಷಕ್ಕೆ ಸ್ವಾಗತಿಸುವುದಾಗಿ ತಿಳಿಸಿದ್ದಾರೆ. ಇಂದು ದೆಹಲಿಯಲ್ಲಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಅವರು ಅರಕಲಗೂಡಿನ ಮಾಜಿ ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಅವರು ಪಕ್ಷ ಸೇರಿದ್ದರಿಂದ ಬಿಜೆಪಿಗೆ ಪ್ರಯೋಜನವಾಗಲಿದೆ ಎಂದು ತಿಳಿಸಿದ್ದಾರೆ.

You may also like

Leave a Comment