Home » Shivmoga vote counting work: ಶಿವಮೊಗ್ಗ: ಮೇ.13ರ ಮತ ಎಣಿಕೆ ಕಾರ್ಯ ಸಂದರ್ಭ, ಕೇಂದ್ರದ ಸುತ್ತಮುತ್ತ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿ

Shivmoga vote counting work: ಶಿವಮೊಗ್ಗ: ಮೇ.13ರ ಮತ ಎಣಿಕೆ ಕಾರ್ಯ ಸಂದರ್ಭ, ಕೇಂದ್ರದ ಸುತ್ತಮುತ್ತ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿ

by Mallika
0 comments
Shimoga vote counting work

Shivmoga vote counting work: ಮೇ.13 ರಂದು ಶಿವಮೊಗ್ಗ ಜಿಲ್ಲೆಯ ವಿಧಾನಸಭಾ ವ್ಯಾಪ್ತಿಯಲ್ಲಿ ಮತಎಣಿಕೆ ಕಾರ್ಯ (Shivmoga vote counting work) ನಡೆಯಲಿರುವುದರಿಂದ, ಕೇಂದ್ರದ ಸುತ್ತಮುತ್ತ ಅಂದು ಸೆ.144 ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಇಂದು ಆದೇಶ ಹೊರಡಿಸಿದ್ದಾರೆ.

ದಿನಾಂಕ 13-05-2023ರಂದು ಬೆಳಿಗ್ಗೆ 6 ಗಂಟೆಯಿಂದ ದಿನಾಂಕ 14-05-2023ರ ಬೆಳಿಗ್ಗೆ 6 ಗಂಟೆಯವರೆಗೆ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಮತ ಎಣಿಕೆಯು ಶಿವಮೊಗ್ಗ ಜಿಲ್ಲೆಯ ಸಹ್ಯಾದ್ರಿ ಕಾಲೇಜಿನಲ್ಲಿ ನಡೆಯಲಿದೆ.

ನಿಬಂಧನೆಯಲ್ಲಿ , ಯಾವುದೇ ಮೆರವಣಿಗೆ ಸಭೆ, ಸಮಾರಂಭಗಳು, ವಿಜಯೋತ್ಸವ ಹಾಗೂ ಇತರೆ ಸಾರ್ವಜನಿಕ ಸಮಾವೇಶಗಳನ್ನು ನಡೆಸುವಂತಿಲ್ಲ. ಐದು ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪುಗುಂಪಾಗಿ ನಿಲ್ಲುವುದನ್ನು ಹಾಗೂ ಓಡಾಡುವುದನ್ನು ನಿಷೇಧಿಸಿದೆ. ಶಸ್ತ್ರಗಳು, ದೊಣ್ಣೆಗಳು, ಕತ್ತಿಗಳು, ಈಟಿಗಳು, ಗದೆಗಳು, ಕಲ್ಲು, ಇಟ್ಟಿಗೆ, ಚಾಕು, ಕೋಲುಗಳು, ಬಂದೂಕುಗಳು, ಲಾರಿಗಳು ಅಥವಾ ಮಾರಕಾಸ್ತ್ರಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದನ್ನು / ಶೇಖರಿಸುವುದನ್ನು ನಿಷೇಧಿಸಿದೆ. ಯಾವುದೇ ಸ್ಫೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು, ಕ್ಷಿಪಣಿಗಳನ್ನು ಎಸೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಯನ್ನು ಮತ್ತು ಶೇಖರಿಸುವುದನ್ನು ನಿಷೇಧಿಸಿದೆ. ಅಣುಕು ಶವಗಳ ಪ್ರದರ್ಶನ ಅಥವಾ ಅವುಗಳ ಅಕೃತಿ ಅಥವಾ ಪ್ರತಿಮೆಗಳನ್ನು ಪ್ರದರ್ಶನ ಮಾಡುವುದನ್ನು, ಪಟಾಕಿ ಸಿಡಿಸಿ ಸಂಭ್ರಮಿಸುವುದನ್ನು ನಿಷೇಧಿಸಲಾಗಿದೆ.

ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದಾತ್ಮಕವಾಗಿ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕರ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗಿರುವುದನ್ನು ನಿಷೇಧಿಸಲಾಗಿದೆ. ಯಾವುದೇ ವ್ಯಕ್ತಿ ನಿಷೇಧಿಸಿರುವ ಮಾರಕಾಸ್ತ್ರ, ಸ್ಫೋಟಕ ವಸ್ತುಗಳನ್ನು, ಬಂದೂಕುಗಳನ್ನು ಹೊಂದಿದ್ದಲ್ಲಿ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್‌ ಅಧಿಕಾರಿರವರಿಗೆ ಅಧಿಕಾರವಿರುತ್ತದೆ ಮತ್ತು ಅಂತಹ ವ್ಯಕ್ತಿಯ ಬಳಿಯಲ್ಲಿರುವ ಮಾರಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳುವುದು. ಪ್ರಜಾಪ್ರಾತಿನಿಧ್ಯ ಕಾಯ್ದೆ 1951 ರಲ್ಲಿನ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.

 

 

ಇದನ್ನು ಓದಿ: Actor Sudeep: ಕಿಚ್ಚ ಸುದೀಪ್‌ ಬೆದರಿಕೆ ಪತ್ರ ವಿಚಾರಕ್ಕೆ ರೋಚಕ ಟ್ವಿಸ್ಟ್, ಪತ್ರ ಬರೆದಾತ ಅರೆಸ್ಟ್! ಯಾರು ಗೊತ್ತಾ ಈ ಆರೋಪಿ? 

You may also like

Leave a Comment