Siddaramaiah: ಬಲಿಷ್ಠ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ (Siddaramaiah) ಅವರು ತನ್ನ ಉಳಿವಿಗಾಗಿ ಕೊನೆ ಅಸ್ತ್ರ ಎಂಬಂತೆ, ಬಿಜೆಪಿ ವಿರುದ್ಧ ಹೊಸ ಆರೋಪ ಒಂದನ್ನು ಹೊರಿಸಿದ್ದಾರೆ. ಹೌದು, ಇದೀಗ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಸಿದ್ದು ಬಿಜೆಪಿ ಹಣಬಲದಿಂದ ಚುನಾವಣೆ ಗೆಲ್ಲಲು ಹೊರಟಿದೆ ಎಂದು ಆರೋಪಿಸಿದ್ದಾರೆ.
ʼಜನರಿಗೆ ತೋರಿಸಲು ಯಾವುದೇ ಅಭಿವೃದ್ಧಿ ಕಾರ್ಯಗಳಿಲ್ಲದ ಕಾರಣ ಆಡಳಿತಾರೂಢ ಬಿಜೆಪಿಯು ʼಹಣಬಲʼದಿಂದ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಬಯಸಿದೆʼ ಎಂದು ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಬುಧವಾರ ಆರೋಪಿಸಿದ್ದಾರೆ.
”ಪ್ರಧಾನಿ ರ‍್ಯಾಲಿಯಿಂದ ಯಾವುದೇ ಪರಿಣಾಮ ಬೀರುವುದಿಲ್ಲ, ಬೆಲೆ ಏರಿಕೆ, ನಿರುದ್ಯೋಗ, ಭ್ರಷ್ಟಾಚಾರ ಅದರಲ್ಲೂ ಶೇ 40 ಕಮಿಷನ್ ಬಗ್ಗೆ ಏನಾದರೂ ಮಾತನಾಡಿದ್ದಾರಾ? ಎರಡು ವರ್ಷಗಳ ಹಿಂದೆ ಶೇ 40 ಕಮಿಷನ್ ಬಗ್ಗೆ ಮನವಿ ಮಾಡಲಾಗಿತ್ತು, ಈ ಬಗ್ಗೆ ಕೈಗೊಂಡ ಕ್ರಮದ ಬಗ್ಗೆ ಏನಾದರೂ ಹೇಳಿದ್ದಾರಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಒಟ್ಟಿನಲ್ಲಿ ʼಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸರಣಿ ಸಾರ್ವಜನಿಕ ಸಭೆಗಳಲ್ಲಿ ರಾಜ್ಯದಲ್ಲಿ ಬೆಲೆ ಏರಿಕೆ, ನಿರುದ್ಯೋಗ ಮತ್ತು ಭ್ರಷ್ಟಾಚಾರದ ಬಗ್ಗೆ ಮೌನವಾಗಿದ್ದಾರೆʼ ಎಂದು ಸಿದ್ದರಾಮಯ್ಯ ಆರೋಪಿಸಿದರು.
ಈಗ “ಚುನಾವಣೆಯಲ್ಲಿ ಹಣದ ಹೊಳೆ ಹರಿದಿದೆ. ಈಗ ಬಿಜೆಪಿಯವರು ಮತದಾರರಿಗೆ ಹಣ ನೀಡುವುದನ್ನು ಬಿಟ್ಟು ಇನ್ನೇನು ಮಾಡಿದ್ದಾರೆ? ತಮ್ಮ ಬಳಿ ಹಣವಿದೆ ಎಂಬುದನ್ನು ಬಿಟ್ಟು ರಾಜ್ಯದ ಬಗ್ಗೆ ಏನು ಹೇಳಲು ಸಾಧ್ಯ? ಅವರು ಏನು ಅಭಿವೃದ್ಧಿ ಮಾಡಿದ್ದಾರೆ?”
ಇನ್ನು ʼಬಿಜೆಪಿಯಿಂದ ಇದುವರೆಗೆ ಒಂದೇ ಒಂದು ಮನೆ ನೀಡಲು ಸಾಧ್ಯವಿಲ್ಲ, ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದರು.
ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ‘ಅನ್ನ ಭಾಗ್ಯ’ ಯೋಜನೆಯಡಿ ತಿಂಗಳಿಗೆ 7 ಕೆಜಿಯಿಂದ 4 ಕೆಜಿ ಉಚಿತ ಅಕ್ಕಿಯನ್ನು ತಿತ್ತುಕೊಂಡಿದ್ದಾರೆ ಎಂದರು.
ನನ್ನ ಆಡಳಿತ ಅನುಭವ ಪ್ರಕಾರ ನಾಲ್ಕು ವರ್ಷಗಳಲ್ಲಿ ಬಿಜೆಪಿಯ ಸಾಧನೆ ಶೂನ್ಯ. ಹೀಗಾಗಿ ಅವರು ಹಣದ ಮೂಲಕ ಚುನಾವಣೆ ಗೆಲ್ಲಲು ಬಯಸಿದ್ದಾರೆ ಎಂದು ನೇರವಾಗಿ ಆರೋಪಿಸಿದ್ದಾರೆ.
