M B Patil: ರಾಜ್ಯದಲ್ಲಿ ಸಿದ್ದರಾಮಯ್ಯ(Siddaramaiah) ಐದು ವರ್ಷ ಪೂರ್ಣಾವಧಿ ಮುಖ್ಯಮಂತ್ರಿ ಆಗಿರಲಿದ್ದಾರೆ. ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ. ಲೋಕಸಭೆ ಚುನಾವಣೆ(Parliament) ಬಳಿಕ ಸಿಎಂ ಬದಲಾವಣೆ ಬಗ್ಗೆ ಎಐಸಿಸಿ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್(M B Patil) ಹೊಸ ಬಾಂಬ್ ಸಿಡಿಸಿದ್ದಾರೆ.
ಹೌದು, ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದ ಕಾಂಗ್ರೆಸ್‌ಗೆ (Congress), ಸಿಎಂ (CM) ಸ್ಥಾನ ಯಾರಿಗೆ ನೀಡುವುದು ಅಂತ ಘೋಷಣೆ ಮಾಡುವುದು ಅಷ್ಟು ಸುಲಭವಾಗಿರಲಿಲ್ಲ. ರಾಜ್ಯ ಕಾಂಗ್ರೆಸ್‌ನ ಪ್ರಬಲ ನಾಯಕರಾದ ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (DK Shivakumar) ಇಬ್ಬರೂ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು. ಕೊನೆಗೂ ಸಿದ್ದರಾಮಯ್ಯಗೆ ಸಿಎಂ ಪಟ್ಟ, ಡಿಕೆಶಿಗೆ ಡಿಸಿಎಂ (DCM) ಸ್ಥಾನ ನೀಡಲಾಗಿತ್ತು. ಅದೂ ಕೂಡ ಎರಡೂವರೆ ವರ್ಷ ಸಿದ್ದರಾಮಯ್ಯ ಸಿಎಂ, ಮತ್ತೆರಡೂವರೆ ವರ್ಷ ಡಿಕೆ ಶಿವಕುಮಾರ್ ಸಿಎಂ ಆಗುವ ಒಪ್ಪಂದ ನಡೆದಿದೆ ಎನ್ನಲಾಗಿತ್ತು. ಸಿದ್ದು ಆಪ್ತ ಬಣದಲ್ಲಿ ಗುರುತಿಸಿಕೊಂಡಿರೋ ಸಚಿವ ಎಂಬಿ ಪಾಟೀಲ್(MB Patil) ಅವರು ಮುಂದಿನ 5 ವರ್ಷವೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಎಂದು ಹೇಳಿಕೆ ನೀಡಿದ್ದು, ಭಾರೀ ಅಚ್ಚರಿಗೆ ಕಾರಣವಾಗಿದೆ.
ಅಂದಹಾಗೆ ಎಂ.ಬಿ ಪಾಟೀಲ್ ದಂಪತಿಗಳಿಂದು ಮೈಸೂರಿನ ಸುತ್ತೂರು ಶ್ರೀಮಠಕ್ಕೆ(Suttur mutt) ಭೇಟಿ ನೀಡಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಎಂಬಿಪಿ, ರಾಜ್ಯದಲ್ಲಿ ಸಿದ್ದರಾಮಯ್ಯ ಅವರೇ 5 ವರ್ಷ ಪೂರ್ಣಾವಧಿ ಸಿಎಂ ಆಗಿರಲಿದ್ದಾರೆ. ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಹೇಳಿದ್ದಾರೆ
ಬಳಿಕ ಮಾತನಾಡಿದ ಅವರು ಬಿಜೆಪಿ(BJP) ಅಧಿಕಾರ ಅವಧಿಯಲ್ಲಿ ನಡೆದ ಎಲ್ಲಾ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ. ಪಿಎಸ್ಐ ಹಗರಣ, ಆರೋಗ್ಯ ಇಲಾಖೆ, ನೀರಾವರಿ ಇಲಾಖೆ ಹಾಗೂ ಇತರೆ ಇಲಾಖೆಗಳಲ್ಲಿ ನಡೆದಿದೆ ಎನ್ನಲಾದ ಹಗರಣಗಳ ಬಗ್ಗೆ ತನಿಖೆ ನಡೆಸಲಾಗುತ್ತದೆ. ಪ್ರತಿಯೊಂದು ಹಗರಣಗಳನ್ನೂ ಬಯಲಿಗೆಳೆಯುತ್ತೇವೆ. ಈ ಮೂಲಕ ತಪ್ಪಿಸ್ಥರನ್ನು ಶಿಕ್ಷೆಗೊಳಪಡಿಸಿ, ನೊಂದವರಿಗೆ ನ್ಯಾಯ ಕೊಡಿಸುತ್ತೇವೆ ಎಂದಿದ್ದಾರೆ.
ಇನ್ನು ಕಾಂಗ್ರೆಸ್(Congress) ಗ್ಯಾರಂಟಿಗಳ ಬಗ್ಗೆ ಮಾತನಾಡಿ ಚುನಾವಣೆಯ ಸಂದರ್ಭದಲ್ಲಿ ಘೋಷಣೆ ಮಾಡಿದ್ದ ಐದು ಗ್ಯಾರಂಟಿ(Guaranty) ಯೋಜನೆಗಳ ಬಗ್ಗೆ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆಯಾಗಿದ್ದು, ಈಗಾಗಲೇ ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಈ ವಿಚಾರದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದರು.
