Shakti Yojanae: ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಉಚಿತ ಬಸ್ ಪ್ರಯಾಣವನ್ನು ನೀಡುವ ಶಕ್ತಿ ಯೋಜನೆಯನ್ನು ರಾಜ್ಯದ ಮಹಿಳೆಯರು ಅತ್ಯುತ್ತಮ ರೀತಿಯಲ್ಲಿ ಉಪಯೋಗಪಡಿಸಿಕೊಳ್ಳುತ್ತಿದ್ದಾರೆ. ರಾಜ್ಯಾದ್ಯಂತ ಉಚಿತ ಪ್ರಯಾಣ ಮಾಡುತ್ತಾ ಹಲವಾರು ಪ್ರದೇಶಗಳನ್ನು ಸಂದರ್ಶಿಸುತ್ತಿದ್ದಾರೆ. ಈ ನಡುವೆ ಸರ್ಕಾರ ಯೋಜನೆಯನ್ನು ಅಪ್ಡೇಟ್ ಮಾಡಲು ಮುಂದಾಗಿದ್ದು ಇದೀಗ ಶಕ್ತಿ ಯೋಜನೆಗೆ ಸ್ಮಾರ್ಟ್ ಕಾರ್ಡ್ ಹಂಚುವ ಯೋಚನೆ ಮಾಡಿದೆ.
ಹೌದು, ಇದುವರೆಗೂ ಮಹಿಳೆಯರು ಆಧಾರ್ ಕಾರ್ಡ್ ತೋರಿಸುವ ಮುಖಾಂತರ ಉಚಿತವಾಗಿ ಟಿಕೆಟ್ ಪಡೆದು ಪ್ರಯಾಣಿಸುತ್ತಿದ್ದರು. ಆದರೆ ಇನ್ನು ಮುಂದೆ ಸರ್ಕಾರವು ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲು ಚಿಂತನೆ ನಡೆಸಿದೆ. ಸಾರಿಗೆ ಬಸ್ ನಲ್ಲಿ ಪ್ರಯಾಣಿಸುವ ರಾಜ್ಯದ ಮಹಿಳೆಯರು ಇನ್ಮುಂದೆ ಸ್ಮಾರ್ಟ್ ಕಾಡ್೯ ತೋರಿಸಿದ್ರೆ ಸಾಕು, ಆಧಾರ್ ಕಾರ್ಡ್ ತೆಗೆದುಕೊಂಡು ಹೋಗುವ ಅಗತ್ಯವಿಲ್ಲ. ಶೀಘ್ರವೇ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ಉಚಿತವಾಗಿ ಕೈಸೇರಲಿದೆ.
ಅಂದಹಾಗೆ ಗ್ಯಾರಂಟಿ ಯೋಜನೆಗಳು ಅರ್ಹರಿಗೆ ಮಾತ್ರ ದೊರಕುವಂತೆ ಮಾಡುವ ಉದ್ದೇಶದೊಂದಿಗೆ ರಾಜ್ಯ ಸರ್ಕಾರ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ. ಅದರಲ್ಲೂ ಅನ್ನಭಾಗ್ಯ ಯೋಜನೆಯಲ್ಲಿ ನಿಯಮ ಮೀರಿ ಬಿಪಿಎಲ್ ಕಾರ್ಡ್ ಹೊಂದಿರುವವರನ್ನು ಪತ್ತೆ ಮಾಡಿ ಅವರ ಪಡಿತರ ಚೀಟಿ ರದ್ದು ಮಾಡಲಾಗಿದೆ. ಅದರ ಜತೆ ಆದಾಯ ತೆರಿಗೆ ಪಾವತಿಸುತ್ತಿರುವವರೂ ಗೃಹಲಕ್ಷ್ಮೀ ಅಡಿ ಸಹಾಯಧನ ಪಡೆಯುತ್ತಿರುವುದನ್ನು ಪತ್ತೆ ಮಾಡಲಾಗಿದೆ. ಇದೀಗ ಶಕ್ತಿ ಯೋಜನೆ ಲಾಭ ರಾಜ್ಯದ ಮಹಿಳೆಯರು ಮಾತ್ರ ಪಡೆಯುವಂತೆ ಮಾಡಲು ಸ್ಮಾರ್ಟ್ಕಾರ್ಡ್ ನೀಡಲು ಸಾರಿಗೆ ಇಲಾಖೆ ಯೋಜಿಸಿದ್ದು, ಅದಕ್ಕಾಗಿ ಅನುಮತಿ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ರಾಜ್ಯ ಸರ್ಕಾರದ ಶಕ್ತಿ ಯೋಜನೆ ಜಾರಿ ಯಾದ 2.5 ವರ್ಷಗಳ ನಂತರ ಇದೀಗ ಸ್ಮಾರ್ಟ್ ಕಾರ್ಡ್ ನೀಡಲು ಸಾರಿಗೆ ಇಲಾಖೆ ನಿರ್ಧರಿಸಿದೆ. ಸಂಪುಟ ಸಭೆಯಲ್ಲಿ ಅನು ಮೋದನೆ ಅಧಿಕಾರಿಗಳು ಮುಂದಾಗಿದ್ದಾರೆ.ಗ್ಯಾರಂಟಿ ಅರ್ಹರಿಗೆ ಮಾತ್ರ ದೊರಕುವಂತೆ ಸರ್ಕಾರ ಈಗಾಗಲೇ ಹಲವು ಕ್ರಮ ಕೈಗೊಂಡಿದೆ. ಶಕ್ತಿ ಯೋಜನೆ ಲಾಭ ರಾಜ್ಯದ ಮಹಿಳೆಯರು ಮಾತ್ರ ಪಡೆಯುವಂತೆ ಮಾಡಲು ಸ್ಮಾರ್ಟ್ಕಾರ್ಡ್ ನೀಡಲು ಸಾರಿಗೆ ಇಲಾಖೆ ಯೋಜಿಸಿದ್ದು, ಅದಕ್ಕಾಗಿ ಅನುಮತಿ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
