Home » Soumya Reddy: ತುಂಬು ಮುಖದ ಚೆಲುವೆ ಈಗ ರಾಜ್ಯ ಕಾಂಗ್ರೆಸ್ ಸಾರಥಿ – ಹೈಕಮಾಂಡ್ ಘೋಷಣೆ, ಪಕ್ಷ ಸೇರಲು ನೂಕು ನುಗ್ಗಲು !!

Soumya Reddy: ತುಂಬು ಮುಖದ ಚೆಲುವೆ ಈಗ ರಾಜ್ಯ ಕಾಂಗ್ರೆಸ್ ಸಾರಥಿ – ಹೈಕಮಾಂಡ್ ಘೋಷಣೆ, ಪಕ್ಷ ಸೇರಲು ನೂಕು ನುಗ್ಗಲು !!

1 comment

Soumya Reddy: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪುತ್ರಿ, ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅರವನ್ನು ನೂತನ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯನ್ನಾಗಿ ನೇಮಕ ಮಾಡಿ ಕಾಂಗ್ರೆಸ್‌ ಹೈಕಮಾಂಡ್‌(Congress Highcomand ) ಆದೇಶ ಹೊರಡಿಸಿದೆ.

ಸದ್ಯ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದ ಪುಷ್ಪಾ ಅಮರನಾಥ್(Pushpa Amaranath) ಅವರನ್ನು ಬದಲಿಸಲಾಗಿದ್ದು, ಕಾಂಗ್ರೆಸ್ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಸೌಮ್ಯ ರೆಡ್ಡಿ(Soumya Reddy) ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕದ ಜೊತೆಗೆ ಚಂಢೀಗಡ ಮತ್ತು ಅರುಣಾಚಲ ಪ್ರದೇಶ ಮಹಿಳಾ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.

ಅಂದಹಾಗೆ ಎರಡು ವಾರಗಳ ಹಿಂದೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸ್ಥಾನಕ್ಕೆ ಸಂದರ್ಶನ ನಡೆಸಿದ್ದ ಕಾಂಗ್ರೆಸ್ ಹೈಕಮಾಂಡ್, ಅಂತಿಮವಾಗಿ ಸೌಮ್ಯರೆಡ್ಡಿಗೆ ಕೆಪಿಸಿಸಿ ಮಹಿಳಾ ಅಧ್ಯಕ್ಷೆಯಾಗಿ ಅವಕಾಶ ಮಾಡಿಕೊಟ್ಟಿದೆ. ಜಯನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿಯಾಗಿರುವ ಸೌಮ್ಯಾ ರೆಡ್ಡಿ ಅವರು ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡಿದ್ದರು.

41 ವರ್ಷದ ಸೌಮ್ಯ ರೆಡ್ಡಿ ಮಾರ್ಚ್ 18, 1983ರಲ್ಲಿ ಜನಿಸಿದರು. ಬೆಂಗಳೂರಿನ ಆರ್‌.ವಿ.ಇಂಜಿನಿಯರಿಂಗ್ ಕಾಲೇಜಿನಲ್ಲಿ ಕೆಮಿಕಲ್ ಇಂಜಿನಿಯರಿಂಗ್ ಅಧ್ಯಯನ ಪೂರ್ಣಗೊಳಿಸಿ, ನ್ಯೂಯಾರ್ಕ್‌ನ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಎಂಎಸ್ ಅಧ್ಯಯನವನ್ನು ಪೂರ್ಣಗೊಳಿಸಿದ್ದಾರೆ. ಸದ್ಯ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದಾರೆ.

You may also like

Leave a Comment