BJP: ನನ್ನನ್ನ ಪಕ್ಷದಿಂದ ಉಚ್ಛಾಟನೆ ಮಾಡಿದಾಗ ಡಿಕೆ ಶಿವಕುಮಾರ್ ಅವರನ್ನ ಬಿಜೆಪಿಗೆ ಸೆಳೆಯುವ ಪ್ರಯತ್ನ ನಡೆದಿತ್ತು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಳಗಾವಿಯಲ್ಲಿ (Belagavi) ಮಾತನಾಡಿದ ಅವರು, ನನ್ನನ್ನ ಉಚ್ಛಾಟನೆ ಮಾಡಿದ ಸಂದರ್ಭದಲ್ಲಿ ದೆಹಲಿಯಲ್ಲಿ ಡಿಕೆ ಶಿವಕುಮಾರ್ ಅವರನ್ನ ಆಪರೇಷನ್ ಮಾಡುವ ಪ್ರಯತ್ನ ನಡೆದಿತ್ತು. ನಾನು ಪಕ್ಷದಲ್ಲಿದ್ರೆ ಇದು ಆಗಲ್ಲ ಅಂತ ಉಚ್ಚಾಟನೆ ಬಳಿಕ ಪ್ರಯತ್ನ ನಡೆದಿತ್ತು ಎಂದು ಸ್ಫೋಟಕ ಹೇಳಿಕೆ ನೀಡಿದರು.ವಿಜಯೇಂದ್ರ ಅವರು ತಾವು ಡಿಸಿಎಂ ಆಗಲು ದೆಹಲಿಯಲ್ಲಿ ಡಿಕೆ ಶಿವಕುಮಾರ್ (DK Shivakumar) ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಬಿಜೆಪಿಯವರೇ ಈ ಮಾತು ನನಗೆ ಹೇಳಿದ್ರು. ಆ ನಂತರ ಜೋಷಿಯವರು ಅಮಿತ್ ಶಾ ಅವರ ಸೂಚನೆ ಮೇರೆಗೆ ನಾವು ಯಾರನ್ನೂ ಸೇರಿಸಿಕೊಳ್ತಿಲ್ಲ ಅಂತ ಹೇಳಿದ್ರು. ಆದ್ರೆ ನಿಜವಾಗಿಯೂ ಡಿಕೆಶಿಯನ್ನ ಬಿಜೆಪಿಗೆ ಕರೆತರುವ ಪ್ರಯತ್ನ ನಡೆದಿತ್ತು ಎಂದು ಹೇಳಿದರು.
ಇದೇ ಡಿಸೆಂಬರ್ 19 ಕ್ಕೆ ಕಾಂಗ್ರೆಸ್‌ನವರು ದೆಹಲಿಗೆ ಹೋಗ್ತಿದ್ದಾರೆ. ಈಗ ಇಲ್ಲಿ ಗುಂಪು ಸಭೆಗಳು, ಡಿನ್ನರ್ ಸಭೆಗಳು ನಡೀತಿವೆ. ಬೆಂಬಲ ಯಾಚನೆ ಮಾಡಲು ಪ್ರತ್ಯೇಕ ಸಭೆಗಳು ನಡೀತಿವೆ. ಇನ್ನರ್ ಮತ್ತು ಡಿನ್ನರ್ ಸಭೆಗಳು ನಡೀತಿವೆ ಎಂದರು.
