Home » ಉತ್ತರಪ್ರದೇಶದಲ್ಲಿ ಎರಡನೇ ಬಾರಿಗೆ ಅಧಿಕಾರದತ್ತ ಬಿಜೆಪಿ !! | ಪಂಚ ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿಗೆ ಮುನ್ನಡೆ

ಉತ್ತರಪ್ರದೇಶದಲ್ಲಿ ಎರಡನೇ ಬಾರಿಗೆ ಅಧಿಕಾರದತ್ತ ಬಿಜೆಪಿ !! | ಪಂಚ ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿಗೆ ಮುನ್ನಡೆ

0 comments

ಉತ್ತರಪ್ರದೇಶದಲ್ಲಿ ಬಿಜೆಪಿ ಈ ಬಾರಿಯೂ ಕಮಾಲ್ ಮಾಡಿದ್ದು, ಈಗಾಗಲೇ 287 ಸ್ಥಾನಗಳಲ್ಲಿ ಮುನ್ನಡೆ ಪಡೆದು ಮತ್ತೊಮ್ಮೆ ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದೆ. ಎಸ್ಪಿ 106, ಬಿಎಸ್ಪಿ 4 ಹಾಗೂ ಕಾಂಗ್ರೆಸ್ 3 ಸ್ಥಾನಗಳಲ್ಲಿ ಮುನ್ನಡೆ ಪಡೆದಿದೆ. ‌ಉತ್ತರ ಪ್ರದೇಶದಲ್ಲಿ ಒಟ್ಟು 403 ಕ್ಷೇತ್ರಗಳಿದ್ದು ಬಹುಮತಕ್ಕೆ 202 ಸ್ಥಾನಗಳು ಬೇಕು.

ಪಂಜಾಬ್‌ ಸ್ಥಾನಗಳಲ್ಲಿ ಆಪ್‌ 89 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿ 5 ,ಕಾಂಗ್ರೆಸ್ 13, ಎಸ್ಎಡಿ 10 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಹಾಗೆಯೇ ಉತ್ತರಾಖಂಡ್ ನ ಒಟ್ಟು 70 ಸ್ಥಾನಗಳ ಪೈಕಿ ಬಿಜೆಪಿ 46, ಕಾಂಗ್ರೆಸ್ 21 ಸ್ಥಾನಗಳಲ್ಲಿ ಮುನ್ನಡೆ ಪಡೆದಿದೆ. ಮಣಿಪುರದ ಒಟ್ಟು 60 ಸ್ಥಾನಗಳ ಪೈಕಿ ಬಿಜೆಪಿ 25, ಕಾಂಗ್ರೆಸ್ 13 ಸ್ಥಾನಗಳಲ್ಲಿ ಮುನ್ನಡೆ ಪಡೆದಿದೆ.
ಅದಲ್ಲದೆ ಗೋವಾದ 40 ಕ್ಷೇತ್ರಗಳಲ್ಲಿ ಬಿಜೆಪಿ 18, ಕಾಂಗ್ರೆಸ್ 13 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಒಟ್ಟಾರೆಯಾಗಿ ಹೇಳುವುದಾದರೆ 5 ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

You may also like

Leave a Comment