Home » ಇಲಾಖೆಯ ಕರ್ತವ್ಯದ ನಡುವೆಯೂ ವಿಡಿಯೊ ಮೂಲಕ ಪ್ರಚಾರ ಮಾಡಿ ಬದ್ದತೆ ತೋರಿದ ಮುಜರಾಯಿ ಸಚಿವರಾದ ಶಶಿಕಲಾ ಜೊಲ್ಲೆ

ಇಲಾಖೆಯ ಕರ್ತವ್ಯದ ನಡುವೆಯೂ ವಿಡಿಯೊ ಮೂಲಕ ಪ್ರಚಾರ ಮಾಡಿ ಬದ್ದತೆ ತೋರಿದ ಮುಜರಾಯಿ ಸಚಿವರಾದ ಶಶಿಕಲಾ ಜೊಲ್ಲೆ

by Praveen Chennavara
0 comments

ಬೆಂಗಳೂರು: ಸಿಂಧಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಭರ್ಜರಿ ಪ್ರಚಾರ ನಡೆಯುತ್ತಿರುವ ಸಂದರ್ಭದಲ್ಲಿ ಇಲಾಖೆಯ ತುರ್ತು ಕಾರ್ಯದ ನಿಮಿತ್ತ ಬೆಂಗಳೂರಿಗೆ ಆಗಮಿಸಿದ್ದ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆಯವರು, ತಮ್ಮ ಪೂರ್ವನಿಗದಿತ ಪ್ರಚಾರ ಕಾರ್ಯವನ್ನು ವಿಡಿಯೊ ಮೂಲಕ ಮಾಡಿ ಪಕ್ಷದ ಬಗ್ಗೆ ತಮಗಿರುವ ಬದ್ಧತೆಯನ್ನು ಪ್ರದರ್ಶಿಸಿದರು.

ಗುರುವಾರ ಹಜ್ ಮತ್ತು ವಕ್ಫ್ ಇಲಾಖೆಯ ತುರ್ತು ಕಾರ್ಯದ ನಿಮಿತ್ತ ಬೆಂಗಳೂರಿಗೆ ಆಗಮಿಸಿದ್ದ ಸಚಿವರಾದ ಶಶಿಕಲಾ ಜೊಲ್ಲೆಯವರು ಶುಕ್ರವಾರ ಸಿಂಧಗಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ರಮೇಶ ಬೂಸನೂರು ಪರವಾಗಿ ವಿವಿಧ ಮಹಿಳಾ ಸಂಘಟನೆಗಳು ಹಾಗೂ ಪಕ್ಷದ ಮಹಿಳಾ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಪ್ರಚಾರ ಮಾಡಬೇಕಾಗಿತ್ತು.
ಆದರೆ, ಶುಕ್ರವಾರ ಬೆಳಿಗ್ಗೆ ಪಕ್ಷದ ವತಿಯಿಂದ ಬೆಂಗಳೂರಿನಲ್ಲಿ ತುರ್ತು ಸಭೆಯಲ್ಲಿ ಪಾಲ್ಗೊಂಡ ಕಾರಣ ನಿಗದಿಯಾಗಿದ್ದ ಮಹಿಳಾ ಸಂಘ ಸಂಸ್ಥೆಗಳ ಸದಸ್ಯರು ಪಾಲ್ಗೊಳ್ಳುವ ಪ್ರಚಾರದಲ್ಲಿ ನೇರವಾಗಿ ತೊಡಗಿಸಿಕೊಳ್ಳಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಮಹಿಳಾ ಸಂಘ ಸಂಸ್ಥೆಯ ಪದಾಧಿಕಾರಿಗಳಿಗೆ ಬೇಸರವಾಗಬಾರದು ಎನ್ನುವ ಕಾರಣಕ್ಕೆ ಬೆಂಗಳೂರಿನಿಂದಲೇ ವಿವಿಧ ಮಹಿಳಾ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಪಕ್ಷದ ಮಹಿಳಾ ಕಾರ್ಯಕರ್ತೆಯರ ಜೊತೆ ವಿಡಿಯೊ ಕರೆ ಮಾಡಿ ಪ್ರಚಾರ ನಡೆಸಿದರು.

ಈ ಮೂಲಕ ಪಕ್ಷ ತಮಗೆ ವಹಿಸಿರುವ ಜವಾಬ್ದಾರಿಯನ್ನು ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಸಚಿವರಾದ ಶಶಿಕಲಾ ಜೊಲ್ಲೆಯವರು ನಿಭಾಯಿಸಿದರು.
ಈ ವಿಡಿಯೊ ಪ್ರಚಾರ ಕಾರ್ಯಕ್ರಮವನ್ನು ದಿವ್ಯಾ ರಾಜೇಶ ಹಾಗರಗಿಯವರು ಜವಾಬ್ದಾರಿ ವಹಿಸಿಕೊಂಡು ಯಶಸ್ವಿಯಾಗಿ ನೆರವೇರಿಸಿದರು.

You may also like

Leave a Comment