Home » Vidhanaparishath by election: ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಘೋಷಣೆ!! ಶೆಟ್ಟರ್ ಸೇರಿ ಮೂವರಿಗೆ ಟಿಕೆಟ್, ಚಿಂಚನಸೂರ್ ಗೆ ಕೋಕ್!!

Vidhanaparishath by election: ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಘೋಷಣೆ!! ಶೆಟ್ಟರ್ ಸೇರಿ ಮೂವರಿಗೆ ಟಿಕೆಟ್, ಚಿಂಚನಸೂರ್ ಗೆ ಕೋಕ್!!

by ಹೊಸಕನ್ನಡ
0 comments
Vidhanaparishath by election

Vidhanaparishath by election: ವಿಧಾನ ಪರಿಷತ್‌ ಉಪ ಚುನಾವಣೆಗೆ (Vidhanaparishath by election) ಕಾಂಗ್ರೆಸ್‌ ಮೂವರು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ (Jagadish Shettar) ಅವರಿಗೆ ಟಿಕೆಟ್‌ ನೀಡಿದೆ.

ಹೌದು, ಲಕ್ಷ್ಮಣ ಸವದಿ(Lakshman savdi), ಆರ್ ಶಂಕರ್(R Shankar) ಹಾಗೂ ಬಾಬುರಾವ್ ಚಿಂಚನಸೂರ್(Baburav chinchanasur) ಅವರ ರಾಜೀನಾಮೆಯಿಂದ ತೆರವಾದ ಮೂರು ಸ್ಥಾನಗಳಿಗೆ ಚುನಾವಣಾ ಆಯೋಗ ಉಪ ಚುನಾವಣೆ ಘೋಷಿಸಿದೆ. ವಿಧಾನಪರಿಷತ್​​ನ ಮೂರು ಸ್ಥಾನಗಳಿಗೆ ಜೂನ್ 30ರಂದು ನಡೆಯಲಿರುವ ಉಪ ಚುನಾವಣೆಗೆ (MLC By Election) ಕಾಂಗ್ರೆಸ್ ಪಕ್ಷವು ಸೋಮವಾರ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಬಿಜೆಪಿ ತ್ಯಜಿಸಿ ಕಾಂಗ್ರೆಸ್​​ಗೆ(Congress) ಸೇರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದ ಜಗದೀಶ ಶೆಟ್ಟರ್​ಗೆ (Jagadish Sjettar) ಟಿಕೆಟ್ ನೀಡಲಾಗಿದೆ. ನಿರೀಕ್ಷೆಯಂತೆಯೇ ಎನ್‌ಎಸ್ ಬೋಸರಾಜು(N S Bhosaraju), ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಬಲಿಗ ತಿಪ್ಪಣ್ಣ ಕಮಕನೂರ್​(Tippanna kamakanur) ಅವರಿಗೂ ಟಿಕೆಟ್​​ ಘೋಷಣೆ ಮಾಡಲಾಗಿದೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಮಂಗಳವಾರ (ಜೂನ್ 20) ಕೊನೆಯ ದಿನವಾಗಿದೆ. ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ.

ಅಂದಹಾಗೆ ಬಿಜೆಪಿಯಿಂದ ಕಾಂಗ್ರೆಸ್ ಸೇರ್ಪಡೆಗೊಂಡು ವಿಧಾನಸಭೆ ಚುನಾವಣೆಯಲ್ಲಿ ಸೋಲನ್ನಪ್ಪಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್(Jagadish shetter) ಮೇಲೆ ಕಾಂಗ್ರೆಸ್ ವಿಶೇಷ ಕಾಳಜಿ ತೋರಿದ್ದು ಐದು ವರ್ಷದ ಅವಧಿಯ ಸ್ಥಾನವನ್ನು ಅವರಿಗೆ ಬಿಟ್ಟುಕೊಟ್ಟಿದೆ. ಜೂನ್ 2028 ವರೆಗೂ ಅವಧಿ ಇರುವ ಸ್ಥಾನಕ್ಕೆ ಸ್ಪರ್ಧೆ ಮಾಡಲು ಹೈಕಮಾಂಡ್ ಸೂಚನೆ ನೀಡಿದೆ. ಇನ್ನು ಸಣ್ಣ ನೀರಾವರಿ ಸಚಿವರಾಗಿರುವ ಬೋಸರಾಜು ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಹೀಗಾಗಿ ಅವರಿಗೆ ವಿಧಾನ ಪರಿಷತ್‌ ಟಿಕೆಟ್‌ ಸಿಗುವುದು ಖಚಿತವಾಗಿತ್ತು.

ಬಾಬೂರಾವ್ ಚಿಂಚನಸೂರ್‌ಗೆ ಟಿಕೆಟ್‌ ಇಲ್ಲ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪರಿಷತ್‌ ಸ್ಥಾನಕ್ಕೆ ರಾಜಿನಾಮೆ ನೀಡಿ ಸ್ಪರ್ಧೆ ಮಾಡಿ ಸೋಲನುಭವಿಸಿದ್ದ ಬಾಬುರಾವ್‌ ಚಿಂಚನಸೂರ್‌ ಸ್ಥಾನಕ್ಕೆ ಈಗ ತಿಪ್ಪಣ್ಣ ಕಮಕನೂರ್‌ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಸ್ತುತ ಬಾಬುರಾವ್ ಚಿಂಚನಸೂರ್ ಅವರಿಗೆ ಅನಾರೋಗ್ಯದ ಕಾರಣ ಕಾಂಗ್ರೆಸ್‌ ಟಿಕೆಟ್‌ ಕೈತಪ್ಪಿದೆ. ಅಖಿಲ ಭಾರತ ಕಾಂಗ್ರೆಸ್‌ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೂಚನೆಯಂತೆ ತಿಪ್ಪಣ್ಣ ಕಮಕನೂರುಗೆ ಟಿಕೆಟ್‌ ನೀಡಲಾಗಿದೆ. ಆದರೆ, ತಮಗೇ ಅವಕಾಶ ನೀಡಬೇಕೆಂದು ಪಟ್ಟು ಹಿಡಿದಿದ್ದ ಬಾಬುರಾವ್ ಚಿಂಚನಸೂರುಗೆ ನಿರಾಶೆಯಾಗಿದೆ. ಕೋಲಿ ಸಮಾಜದ ಮತ್ತೊಬ್ಬ ನಾಯಕ ತಿಪ್ಪಣ್ಣ ಕಮಕನೂರುಗೆ ರಾಜ್ಯ ರಾಜಕಾರಣಕ್ಕೆ ಪ್ರವೇಶ ಮಾಡಲು ಅವಕಾಶ ಮಾಡಿಕೊಡಲಾಗಿದೆ.

 

ಇದನ್ನು ಓದಿ: Olle hudga pratham: ‘ವಿದೇಶಕ್ಕೆ ಹೋದ್ರೂ ಅದೇ ಆಗೋದು, ಇಲ್ಲಿ ಮಾಡಿದ್ರೂ ಅದೇ ಆಗೋದು’!! ಮದುವೆ ಮುಂಚೆಯೇ ಹನಿಮೂನ್ ಬಗ್ಗೆ ಮಾತಾಡಿದ ಒಳ್ಳೇ ಹುಡ್ಗ ಪ್ರಥಮ್!! 

You may also like

Leave a Comment