Home » BL Santhosh: ಸಿಇಟಿ ಪರೀಕ್ಷೆ ದಿನವೇ ಪ್ರಮಾಣವಚನ : ಸಿದ್ದರಾಮಯ್ಯಗೆ ಬಿಎಲ್ ಸಂತೋಷ್ ಫುಲ್‌ ಕ್ಲಾಸ್‌..!?

BL Santhosh: ಸಿಇಟಿ ಪರೀಕ್ಷೆ ದಿನವೇ ಪ್ರಮಾಣವಚನ : ಸಿದ್ದರಾಮಯ್ಯಗೆ ಬಿಎಲ್ ಸಂತೋಷ್ ಫುಲ್‌ ಕ್ಲಾಸ್‌..!?

0 comments
BL Santhosh

BL Santhosh: ಬೆಂಗಳೂರು : ಸಿಇಟಿ ಪರೀಕ್ಷೆ ದಿನವೇ ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಪ್ರಮಾಣ ವಚನ ಸಮಾರಂಭ ನಡೆಯುವ ಬಗ್ಗೆ ಮೋದಿ ರೋಡ್​ ಶೋ ಟೀಕಿಸಿದ್ದ ಸಿದ್ದರಾಮಯ್ಯಗೆ ಟ್ವೀಟ್‌ ಮೂಲಕ
ಬಿಎಲ್ ಸಂತೋಷ್ (BL Santhosh) ಫುಲ್‌ ಕ್ಲಾಸ್‌ ತೆಗೆದುಕೊಂಡಿದ್ದಾರೆ.

ನಾಳೆ (ಮೇ20ರಂದು) ಕಂಠೀರವ ಕ್ರೀಡಾಂಗಣದಲ್ಲಿ ಮಧ್ಯಾಹ್ನ 12.30ಕ್ಕೆ ಕರ್ನಾಟಕ ಸಿಎಂ ಆಗಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ ನಡೆಸಲಾಗುತ್ತಿದೆ. ಪ್ರಮಾಣವಚನ ಕಾರ್ಯಕ್ರಮಕ್ಕೆ ಎಲ್ ಸಂತೋಷ್ ತಮ್ಮ ಅಧಿಕೃತ ಖಾತೆ ಟ್ವಿಟ್ಟರ್‌ನಲ್ಲಿ ಟೀಕಿಸಿದ್ದು, ಮೊದಲ ಸುತ್ತಿನ ನೀಟ್ ಪರೀಕ್ಷೆ ನಡೆದ ದಿನ ಮೋದಿ ರೋಡ್ ಶೋ ನಡೆದಿತ್ತು. ಅದಕ್ಕೆ ಸಿದ್ದರಾಮಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ರು. ಆದ್ರೆ ನಾಳೆ ಸಿಇಟಿ ಪರೀಕ್ಷೆ ಇದೆಯಲ್ವ ಯಾಕೆ ಪದಗ್ರಹಣ ಕಾರ್ಯಕ್ರಮ ಇಟ್ಟುಕೊಂಡಿದ್ದಾರೆ. ಒಂದೆರಡು ದಿನಗಳ ಕಾಲ ಮುಂದೂಡಿದ್ರೆ ಏನಾಗುತ್ತಿತ್ತು. ಇದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಈ ಹಿಂದೆ ಮೋದಿ ರೋಡ್‌ ಶೋಗೆ ಸಿದ್ದರಾಮಯ್ಯ ಟ್ವಿಟ್ಟರ್‌ನಲ್ಲಿ ಟೀಕಿಸಿದ್ದು ಹೀಗೆ : ನೀಟ್ ಪರೀಕ್ಷಾರ್ಥಿಗಳು ಮತ್ತು ಬೆಂಗಳೂರಿನ ಜನರ ವಿರೋಧವನ್ನು ಧಿಕ್ಕರಿಸಿ ಪ್ರಧಾನಿ ಅವರು ನಾಳೆ ಬೆಂಗಳೂರಿನಲ್ಲಿ ನಡೆಸಲಿರುವ ರೋಡ್ ಶೋ ಅತ್ಯಂತ ಬೇಜವಾಬ್ದಾರಿತನದ ನಡೆ. ಮೋದಿ ಅವರು ಪ್ರಚಾರ ಮಾಡಲಿ ನಮ್ಮ ತಕರಾರು ಇಲ್ಲ. ಆದರೆ ವಿದ್ಯಾರ್ಥಿಗಳಿಗೆ ಆಗುವ ತೊಂದರೆಗೆ ಯಾರು ಹೊಣೆ ಎಂದಿದ್ದರು.

 

 

 

ಇದನ್ನು ಓದಿ: Puttur: ಪುತ್ತೂರು : ಬ್ಯಾನರ್ ವಿವಾದ,ದೌರ್ಜನ್ಯ ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಭೇಟಿ 

 

You may also like

Leave a Comment