Siddaramaiah: ಬೆಂಗಳೂರು : ಕರ್ನಾಟಕಕ್ಕೆ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಸುದ್ದಿಗೋಷ್ಟಿ ನಡೆಸಿಮ, ಘೋಷಣೆ ಮಾಡಿದ ಬೆನ್ನಲ್ಲೇ ಕಾಂಗ್ರೆಸ್ ಗ್ಯಾರೆಂಟಿಗಳ ಬಗ್ಗೆಟೀಕಿಸಿದವರಿಗೆ ಸಿದ್ದರಾಮಯ್ಯ ಖಡಕ್ ಟಾಂಗ್ ನೀಡಿದ್ದಾರೆ.
ಕರ್ನಾಟಕ ವಿಧಾನ ಸಭೆ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಕಾಂಗ್ರೆಸ್ ಗೆದ್ದರೆ ಕೆಲವು ಗ್ಯಾರಂಟಿಗಳನ್ನು ಘೋಷಣೆ ಮಾಡುವುದಾಗಿ ಹೇಳಿಕೊಂಡಿದ್ದರು. ಈ ಬಾರಿ ಕರ್ನಾಟಕ ವಿಧಾನ ಸಭೆ ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಗೆಲುವು ಸಾಧಿಸಿದೆ. ಬಳಿಕ ರಾಜ್ಯ ರಾಜಕಾರಣದಲ್ಲಿ ಸಿಎಂ ಹುದ್ದೆ ಆಯ್ಕೆಗಾಗಿ ಭಾರೀ ಫೈಟ್ ನಡೆಯುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ʻ ಕೈʼ ವಿರುದ್ದ ಭಾರೀ ವಿರೋಧ ವ್ಯಕ್ತವಾಗುತ್ತಿದ್ದವು, ಕರ್ನಾಟದಲ್ಲಿ ಗ್ಯಾರಂಟಿಗಳ ಬಗ್ಗೆ ಭಾರೀ ಚರ್ಚೆಯಾಗಿದ್ದಲ್ಲದೇ ಸಿಎಂ ಗ್ಯಾರಂಟಿಯೇ ಆಗಿಲ್ಲ, ಇನ್ನೂ ಗ್ಯಾರಂಟಿ ಯಾವಾಗ ಈಡೇರಿಸುತ್ತಾರೋ ಎಂದು ಬಿಜೆಪಿ ವ್ಯಂಗ್ಯವಾದ ಟೀಕೆಗಳನ್ನು ಮಾಡಲಾಗಿದೆ.
ಈ ಬಗ್ಗೆ ಸಿಟ್ಟುಗೊಂಡ ಸಿದ್ದರಾಮಯ್ಯ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ನೂತನ ಮುಖ್ಯಮಂತ್ರಿ ಹೆಸರು ಘೋಷಣೆ ಮಾಡಿದ ಬೆನ್ನಲ್ಲೆ ಬಿಜೆಪಿಗಳ ಕಂಡ ಸಿದ್ದರಾಮಯ್ಯ ಟ್ಟಿಟ್ಟರ್‌ನಲ್ಲಿ ಮೊದಲ ಬಾರಿ ಗ್ಯಾರಂಟಿಗಳ ಬಗ್ಗೆ ಟ್ವೀಟ್ ಮಾಡಿದ್ದಾರೆ. ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ . ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ ಎಂದು ಬರೆದುಕೊಳ್ಳುವ ಮೂಲಕ ಟ್ವೀಟ್ ಮೂಲಕ ಟಾಂಗ್ ನೀಡಿದ್ದಾರೆ ಎಂದು ವರದಿಯಾಗಿದೆ.
ಇದನ್ನು ಓದಿ: Railway station: ಈ ರೈಲು ನಿಲ್ದಾಣವು ಅತಿ ಹೆಚ್ಚು ಪ್ಲಾಟ್‌ಫಾರ್ಮ್‌ಗಳನ್ನು ಹೊಂದಿದೆ!
