Puttur: ಆರ್‌ಎಸ್ ಎಸ್ ಮುಖಂಡ ಕಲ್ಲಡ್ಕ ಡಾ.ಪ್ರಭಾಕರ ಭಟ್ ಅವರು ಉಪ್ಪಳಿಗೆಯಲ್ಲಿ ಅ.20ರಂದು ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ, ಅವಮಾನಕಾರಿ ಭಾಷಣ ಮಾಡಿರುವ ಆರೋಪದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಪರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನ.10ಕ್ಕೆ ಮುಂದೂಡಿಕೆಯಾಗಿದೆ.
ನಿರೀಕ್ಷಣಾ ಜಾಮೀನು ನೀಡುವುದಕ್ಕೆ ಸರಕಾರಿ ಅಭಿಯೋಜಕಿ ಶ್ರೀಮತಿ ಜಯಂತಿ ಎಸ್ .ಭಟ್ ಅವರು ಆಕ್ಷೇಪಣೆ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಬಿಎನ್‌ಎಸ್ ಸೆಕ್ಷನ್ 338,339ರಡಿ ದೂರುದಾರೆ ಈಶ್ವರಿ ಪದ್ಮುಂಜ ಅವರ ಪರ ವಕೀಲ ಪಿ.ಕೆ.ಸತೀಶನ್‌ರವರು, ಪ್ರಾಸಿಕ್ಯೂಶನ್ ಜೊತೆ ದೂರುದಾರರಿಗೂ ವಾದ ಮಂಡನೆಗೆ ಅವಕಾಶ ಕೋರಿ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಅರ್ಜಿದಾರ ಡಾ.ಪ್ರಭಾಕರ ಭಟ್ ಅವರ ವಕೀಲ ಮಹೇಶ್ ಕಜೆ ಅವರು ಕಾಲಾವಕಾಶ ಕೋರಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ನ್ಯಾಯಾಲಯ ನ.10ಕ್ಕೆ ಮುಂದೂಡಿದೆ.
