Home » T-20 World Cup : ಟಿ-20 ವಿಶ್ವಕಪ್ ಗೆ ಭಾರತ ತಂಡ ಪ್ರಕಟ!! ಗಿಲ್ ಔಟ್, ಸೂರ್ಯಕುಮಾರ್ ಸಾತ್

T-20 World Cup : ಟಿ-20 ವಿಶ್ವಕಪ್ ಗೆ ಭಾರತ ತಂಡ ಪ್ರಕಟ!! ಗಿಲ್ ಔಟ್, ಸೂರ್ಯಕುಮಾರ್ ಸಾತ್

0 comments

T-20 World Cup : ಟಿ 20 ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟವಾಗಿದೆ. ಸೂರ್ಯ ಕುಮಾರ್ ಯಾದವ್ ತಂಡವನ್ನ ಮುನ್ನಡೆಸಲಿದ್ದಾರೆ. ಉಪನಾಯಕನಾಗಿ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ. ಆದರೆ ಶುಭಮನ್ ಗಿಲ್ ತಂಡದಿಂದ ಹೊರಗುಳಿದಿದ್ದಾರೆ. 

ಟಿ20 ವಿಶ್ವಕಪ್​ಗೆ ಭಾರತ ತಂಡ: 

ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವು ಫೆಬ್ರವರಿ 7 ರಿಂದ ಅಭಿಯಾನ ಆರಂಭಿಸಲಿದ್ದು, ಮೊದಲ ಪಂದ್ಯದಲ್ಲಿ ಯುಎಸ್​ಎ ತಂಡವನ್ನು ಎದುರಿಸಲಿದೆ. ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಫೆಬ್ರವರಿ 15 ರಂದು ತನ್ನ ಬದ್ಧ ವೈರಿ ಪಾಕಿಸ್ತಾನ್ ವಿರುದ್ಧ ಕಣಕ್ಕಿಳಿಯಲಿದೆ

You may also like