Realme C51 Phone sale started: ಜಾಗತಿಕ ಮಾರುಕಟ್ಟೆಯಲ್ಲಿ ಜೋರಾಗಿ ಸದ್ದು ಮಾಡಿದ್ದ ರಿಯಲ್‌ಮಿ C51 ಇದೀಗ ಭಾರತಕ್ಕೆ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದೆ. ಪ್ರಸಿದ್ಧ ರಿಯಲ್ ಮಿ ಕಂಪನಿಯ ಸ್ಮಾರ್ಟ್ಫೋನ್ಗಳು ದೇಶದಲ್ಲಿ ಆಗಾಗ ಬಿಡುಗಡೆ ಆಗುತ್ತಿರುತ್ತದೆ. ಸೋಮವಾರ ರಿಯಲ್ ಮೀ ಕಂಪನಿ ದೇಶದಲ್ಲಿ ತನ್ನ C-ಸರಣಿ ಅಡಿಯಲ್ಲಿ ಹೊಸ ರಿಯಲ್ ಮಿ C51 (Realme C51) ಮೊಬೈಲ್ ಅನಾವರಣ ಮಾಡಿದ್ದು, ಡ್ಯುಯಲ್-ಟೆಕ್ಸ್ಚರ್ ವಿನ್ಯಾಸವನ್ನು ಒಳಗೊಂಡ ಈ ಸ್ಮಾರ್ಟ್ಫೋನ್ ಈಗಾಗಲೇ ತನ್ನ ಸೇಲ್ ಅನ್ನು ಪ್ರಾರಂಭ(Realme C51 Phone sale started) ಮಾಡಿದೆ.
ರಿಯಲ್‌ಮಿ C51 ಸ್ಮಾರ್ಟ್‌ಫೋನ್ ಭಾರತದಲ್ಲಿ ಅನಾವರಣಗೊಂಡಿದ್ದು, ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ರಿಯಲ್ ಮಿ C51 ಫೋನ್ 1600 x 720 ಪಿಕ್ಸೆಲ್‌ಗಳ ರೆಸಲ್ಯೂಶನ್, 90Hz ರಿಫ್ರೆಶ್ ದರ, 180Hz ಟಚ್ ಸ್ಯಾಂಪ್ಲಿಂಗ್ ದರ ಮತ್ತು 560 nits ವರೆಗೆ ಗರಿಷ್ಠ ಬ್ರೈಟ್‌ನೆಸ್‌ನೊಂದಿಗೆ 6.7-ಇಂಚಿನ HD+ ಡಿಸ್ ಪ್ಲೇಯನ್ನು ಒಳಗೊಂಡಿದೆ. ಇದಲ್ಲದೆ ಸ್ಮಾರ್ಟ್‌ಫೋನ್ 2TB ಸಂಗ್ರಹ ಸಾಮರ್ಥ್ಯದ ಮೆಮೊರಿ ಕಾರ್ಡ್ ಅನ್ನು ಬೆಂಬಲಿಸಲಿದೆ.

Image source: Lennews.in
ರಿಯಲ್‌ಮಿ C51 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಬೆಂಬಲ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲ ನೀಡಲಿದೆ. ಡ್ಯುಯಲ್ 4G VoLTE, Wi-Fi 802.11ac, ಬ್ಲೂಟೂತ್ 5.0, GPS + GLONASS, ಮತ್ತು USB ಟೈಪ್-C. ಭದ್ರತೆಗಾಗಿ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅಳವಡಿಸಲಾಗಿದೆ.
ರಿಯಲ್‌ಮಿ C51 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದ್ದು,5 ಮೆಗಾಪಿಕ್ಸೆಲ್ AI ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.ಇದರ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ AI ಸೆನ್ಸಾರ್ ಅನ್ನು ಒಳಗೊಂಡಿದೆ. ಹಿಂಭಾಗದ ಕ್ಯಾಮೆರಾದೊಂದಿಗೆ ಎಲ್‌ಇಡಿ ಫ್ಲ್ಯಾಷ್ ಅನ್ನು ಒಳಗೊಂಡಿದೆ. ಈ ಫೋನ್ ಯುನಿಸಾಕ್ T612 ಆಕ್ಟಾ-ಕೋರ್ 12nm ಪ್ರೊಸೆಸರ್ ಜೊತೆಗೆ Mali-G57 GPU ನಿಂದ ಚಾಲಿತವಾಗಿದೆ.
4GB ವರ್ಚುವಲ್ RAM ಬೆಂಬಲ ಹೊಂದಿದ್ದು, ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಒಳಗೊಂಡಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ಕೇವಲ 7.99mm ದಪ್ಪದಲ್ಲಿ ಸ್ಲಿಮ್ ಪ್ರೊಫೈಲ್ ಅನ್ನು ನಿರ್ವಹಿಸುತ್ತದೆ.ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ ಮುಂಭಾಗ 5MP ಕ್ಯಾಮೆರಾ ಆಯ್ಕೆ ನೀಡಲಾಗಿದೆ.
ಭಾರತದಲ್ಲಿ ರಿಯಲ್ ಮಿ C51 ಸ್ಮಾರ್ಟ್ಫೋನ್ ಕೇವಲ ಒಂದು ಆಯ್ಕೆಯಲ್ಲಿ ಬಿಡುಗಡೆಯಾಗಿದ್ದು, ಇದರ 4GB RAM + 64GB ಸ್ಟೋರೇಜ್ ಸಾಮರ್ಥ್ಯದ ಬೆಲೆ ಗಮನಿಸಿದರೆ, ಕೇವಲ 8,999 ರೂ. ನಿಗದಿ ಮಾಡಲಾಗಿದೆ.ಈ ಸ್ಮಾರ್ಟ್‌ಫೋನ್ ಅನ್ನು ಮಿಂಟ್ ಗ್ರೀನ್ ಮತ್ತು ಕಾರ್ಬನ್ ಬ್ಲ್ಯಾಕ್ ಬಣ್ಣಗಳಲ್ಲಿ ಖರೀದಿ ಮಾಡಬಹುದು. ಇದು ರಿಯಲ್‌ಮಿ.ಕಾಮ್ ಮತ್ತು ಫ್ಲಿಪ್‌ಕಾರ್ಟ್ ಹಾಗೂ ಆಫ್‌ಲೈನ್ ಸ್ಟೋರ್‌ಗಳ ಮೂಲಕ ಖರೀದಿ ಮಾಡಬಹುದು.
ಇದನ್ನೂ ಓದಿ: Chikkamagaluru:ಬೈಕ್‌ಗೆ ಗುದ್ದಿದ ಗಿಚ್ಚ ಗಿಲಿ ಗಿಲಿ ಚಂದ್ರಪ್ರಭಾ ಕಾರು- ಸವಾರ ಗಂಭೀರ- ಚಂದ್ರಪ್ರಭಾ ಪರಾರಿ !!
