Home » Indigo: ಇಂಡಿಗೋ ವಿಮಾನ ಹಾರಾಟ ಬಿಕ್ಕಟ್ಟು: ಟಿಕೆಟ್ ದರ ಹತ್ತು ಪಟ್ಟು ಹೆಚ್ಚಿಸಿದ ಇತರ ವಿಮಾನ

Indigo: ಇಂಡಿಗೋ ವಿಮಾನ ಹಾರಾಟ ಬಿಕ್ಕಟ್ಟು: ಟಿಕೆಟ್ ದರ ಹತ್ತು ಪಟ್ಟು ಹೆಚ್ಚಿಸಿದ ಇತರ ವಿಮಾನ

0 comments
Indigo flight ticket discount

Indigo: ಇಂಡಿಗೋ ವಿಮಾನ (Indi Go Flights) ಹಾರಾಟದಲ್ಲಿ 5ನೇ ದಿನವೂ ವ್ಯತ್ಯಯ ಕಂಡುಬಂದಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru Airport) ಪ್ರಯಾಣಿಕರ ಪರದಾಟ ಮುಂದುವರಿದಿದೆ.

ಕಳೆದ ನಾಲ್ಕು ದಿನಗಳಲ್ಲಿ ಇಂಡಿಗೋದ ಒಂದು ಸಾವಿರಕ್ಕೂ ಅಧಿಕ ವಿಮಾನಗಳ ಹಾರಾಟ ರದ್ದಾಗಿದ್ದು ಜನರು ವಿಮಾನ ನಿಲ್ದಾಣಗಳಲ್ಲಿ ಪರದಾಡುತ್ತಿರುವುದಂತೂ ಹೇಳತೀರದಾಗಿದೆ. ಆರಂಭದಲ್ಲಿ ಸಣ್ಣ ಸಮಸ್ಯೆಯಂತೆ ಭಾಸವಾದ ಇದು ಒಂದೆರಡು ದಿನಗಳಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ವಿಮಾನಗಳಿದ್ದರೂ ಅದನ್ನು ಆಪರೇಟ್ ಮಾಡಲು ಸಿಬ್ಬಂದಿಗಳಿಲ್ಲದ ಸನ್ನಿವೇಶ ಇಂಡಿಗೋಗೆ ಬಂದಿದೆ. ಇದೇ ಕಾರಣದಿಂದಲೇ ದೆಹಲಿ, ಬೆಂಗಳೂರು, ಲಕ್ನೋ, ಜಮ್ಮು ಕಾಶ್ಮೀರ, ಚೆನ್ನೈ, ಹೈದರಾಬಾದ್, ಭೂಪಾಲ್ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಸಂಪೂರ್ಣವಾಗಿ ವಿಮಾನಗಳ ಹಾರಾಟ ರದ್ದು ಮಾಡಿರುವುದಾಗಿ ಇಂಡಿಗೋ ಘೋಷಣೆ ಮಾಡಿದೆ. ಧಿಡೀರ್‌ ಬೆಲೆ ಏರಿಕೆಇದೇ ಪರಿಸ್ಥಿತಿಯ ಲಾಭ ಪಡೆದಿರುವ ಇತರೆ ಏರ್‌ಲೈನ್‌ಗಳು ಏರ್ ಫೇರ್ ನಿಯಮಗಳನ್ನು ಉಲ್ಲಂಘಿಸಿ ಟಿಕೆಟ್‌ಗಳ ಮೇಲೆ ಹತ್ತಕ್ಕಿಂತ ಹೆಚ್ಚು ಪಟ್ಟು ಬೆಲೆಯನ್ನು ಏರಿಕೆ ಮಾಡಿವೆ. ಮಹಾನಗರಿಗೆ 5 ರಿಂದ 8 ಸಾವಿರ ರೂಪಾಯಿಗೆ ಸಿಗಬೇಕಿದ್ದ ಎಕಾನಮಿ ಟಿಕೆಟ್‌ಗಳು 50 ರಿಂದ 80 ಸಾವಿರ ರೂಪಾಯಿವರೆಗೂ ಏರಿಕೆಯಾಗಿದೆ. ಈ ಬಗ್ಗೆ ವಿರೋಧ ಪಕ್ಷಗಳು ಸಂಸತ್‌ನಲ್ಲಿ ಧ್ವನಿ ಎತ್ತುತ್ತಿದ್ದಂತೆ ಸರ್ಕಾರ ಮಧ್ಯಪ್ರವೇಶ ಮಾಡಿದೆ.

You may also like