11
Karnataka: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸಾರಿಗೆ ನೌಕರರಿಗೆ ವರ್ಗಾವಣೆ ಭಾಗ್ಯ ಸಿಕ್ಕಿದೆ. ಹೌದು, ಸಾರಿಗೆ ನಿಗಮದಲ್ಲಿ ಅಂತರ ನಿಗಮ ವರ್ಗಾವಣೆಗೆ ಸಾರಿಗೆ ನಿಗಮ ಅಸ್ತು ಎಂದಿದೆ. ಒಂದು ನಿಗಮದಿಂದ ಮತ್ತೊಂದು ನಿಗಮಕ್ಕೆ ವರ್ಗಾವಣೆಗೆ ಅವಕಾಶ ನೀಡಲಾಗಿದೆ.
ಜನವರಿ 1ರಿಂದ ಅಂತರ ನಿಗಮ ವರ್ಗಾವಣೆಗೆ ಅವಕಾಶ ನೀಡಲಾಗಿದೆ. ಜನವರಿ 1 ರಿಂದ ಜ. 31 ವರೆಗೆ ಕೆಎಸ್ಆರ್ಟಿಸಿ ಸಾಮಾನ್ಯ ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಈ ಮೊದಲು ನಿಗಮದಿಂದ ನಿಗಮಕ್ಕೆ ವರ್ಗಾವಣೆಗೆ ಅವಕಾಶ ಇರಲಿಲ್ಲ, ಸಾರಿಗೆ ನಿಗಮ ನಿಗಮದೊಳಗೆ ಮಾತ್ರ ವರ್ಗಾವಣೆ ಮಾಡುತ್ತಿದ್ದರು. ಇದೀಗ ಹಲವು ವರ್ಷಗಳ ಬಳಿಕ ಅಂತರ ನಿಗಮ ವರ್ಗಾವಣೆಗೆ ಅನುಮತಿ ನೀಡಲಾಗಿದೆ. ಕೆಎಸ್ಆರ್ಟಿಸಿ ಎಂಡಿ ಅಕ್ರಂ ಪಾಷ, ನಿಗಮದ ಎಲ್ಲಾ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ.
