Home » ಅಕ್ರಮ ಸಕ್ರಮ ಅರ್ಜಿ ಸಲ್ಲಿಸಲು ಕಾಲಾವಕಾಶ ವಿಸ್ತರಣೆ | ಕೊನೆಯ ದಿನಾಂಕ ಗಮನಿಸಿ

ಅಕ್ರಮ ಸಕ್ರಮ ಅರ್ಜಿ ಸಲ್ಲಿಸಲು ಕಾಲಾವಕಾಶ ವಿಸ್ತರಣೆ | ಕೊನೆಯ ದಿನಾಂಕ ಗಮನಿಸಿ

by Praveen Chennavara
0 comments

ಬೆಂಗಳೂರು :ಸರಕಾರಿ ಜಮೀನುಗಳಲ್ಲಿ ಹಲವು ವರ್ಷಗಳಿಂದ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಭೂರಹಿತರು, ಸಣ್ಣ ರೈತರು ಜಮೀನುಗಳ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಒಂದು ವರ್ಷದ ಅವಧಿಗೆ ಮುಂದೂಡುವ ಮೂಲಕ ರಾಜ್ಯ ಸರಕಾರ ರೈತರಿಗೆ ಸಿಹಿ ಸುದ್ದಿ ನೀಡಿದೆ.

ಸರಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94ಎ(4)ಗೆ ತಿದ್ದುಪಡಿ ಮಾಡಿ ನಮೂನೆ -57ರಲ್ಲಿ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ವಿಸ್ತರಿಸಲಾಗಿದೆ. ಈ ಹಿಂದೆ ನೀಡಿದ ಆದೇಶದಲ್ಲಿ 26-05-2022ಅಧ್ಯಾದೇಶವನ್ನು ಬದಲಾವಣೆ ಮಾಡಿರುವ ಸರಕಾರ 30-05-2022ರಿಂದ ಒಂದು ವರ್ಷದ ಅವಧಿಗೆ ನಮೂನೆ-57ರಲ್ಲಿ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ವಿಸ್ತರಿಸಿ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಸಿ. ಬಲರಾಮ್ ಆದೇಶಿಸಿದ್ದಾರೆ.

You may also like

Leave a Comment