ಮಳೆ ಎಲ್ಲೆಂದರಲ್ಲಿ ಯಾವಾಗ ಬೇಕು ಆವಾಗ ಮನಸೋ ಇಚ್ಛೆ ಸುರಿಯುತ್ತಿದೆ. ಹೌದು ಜನರು ಮಳೆಯಿಂದ ಬೇಸತ್ತು ಹೋಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದಂತೆ ಆಗಿದೆ. ಹೌದು ಕರ್ನಾಟಕದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ವರುಣನ ಅಬ್ಬರ ಇರಲಿದೆ.
ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಳವಾಗಿದ್ದು, ಹೀಗಾಗಿ ಉತ್ತರ ಒಳನಾಡಿನಲ್ಲಿ ಇಂದಿನಿಂದ ಅ. 24ರವರೆಗೆ ಮಳೆಯಾಗಲಿದೆ ಎಂದು ಮಾಹಿತಿ ಇದೆ.
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಸತತ ಎರಡು ದಿನಗಳಿಂದ ಸುಮಾರು 16 ಸೆಂಮೀ ಮಳೆಯಾಗಿದೆ. ಹಲವಾರು ಜಮೀನುಗಳಿಗೆ ನೀರು ನುಗ್ಗಿ ಬೆಳೆ ಹಾನಿಯಾಗಿದ್ದು ಹಾಗೂ ಹಲವು ಪಟ್ಟಣ ಸೇರಿದಂತೆ ಶಾಲೆಗಳಿಗೂ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಆವರಣದಲ್ಲಿ ನೀರು ನಿಂತು ಕೆರೆಯಂತಾಗಿದೆ. ಮಳೆಯಿಂದ ಅಪಾರ ಪ್ರಮಾಣದ ಬೆಳೆಗಳು ನಾಶವಾಗಿದ್ದು ರೈತರು ಕಂಗಾಲಾಗಿದ್ದಾರೆ. ಈ ಕುರಿತು ರೈತರು ಅತಿವೃಷ್ಟಿ-ಪೀಡಿತ ಸ್ಥಳ ಘೋಷಣೆಗೆ ಒತ್ತಾಯಿಸಿದ್ದಾರೆ.
ಹೌದು ಕರ್ನಾಟಕದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಳವಾಗಿದ್ದು, ಹೀಗಾಗಿ ಉತ್ತರ ಒಳನಾಡಿನಲ್ಲಿ ಇಂದಿನಿಂದ ಅ. 24ರವರೆಗೆ ಮಳೆಯಾಗಲಿದೆ.
ಎಲ್ಲೋ ಅಲರ್ಟ್ :
ಬೆಂಗಳೂರು, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಇನ್ನೂ 3 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಚದುರಿದ ಮಳೆಯಾಗುವ ನಿರೀಕ್ಷೆಯಿದೆ. ಇಂದು ಕೂಡ ಬೆಂಗಳೂರಿನಲ್ಲೂ ಭಾರೀ ಮಳೆ ನಿರೀಕ್ಷೆಯಿದ್ದು, ಈ ವರ್ಷ ಬೆಂಗಳೂರಿನಲ್ಲಿ 1,706 ಮಿಮೀ ದಾಖಲೆಯ ಮಳೆಯಾಗಿದೆ. ಇನ್ನು 2017ರಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 1,696 ಮಿ.ಮೀ ಮಳೆಯಾರುವ ಮಾಹಿತಿ ದೊರೆತಿದೆ.
ಮಳೆಯ ಅವಾಂತರದಿಂದ ರೈತರು ಆಕ್ರೋಶಕ್ಕೆ ಒಳಗಾಗಿದ್ದಾರೆ. ಜನಜೀವನ ಅಸ್ತವ್ಯಸ್ತ ಆಗಿದೆ. ಇದಕ್ಕೆಲ್ಲ ಸರಕಾರ ಸೂಕ್ತ ಕ್ರಮ ಮತ್ತು ಪರಿಹಾರ ಕೈಗೊಳ್ಳಬೇಕಾಗಿ ಆಗ್ರಹಿಸುತ್ತಿದ್ದಾರೆ.
