Home » Kadaba: ಕಡಬ: 14ರ ಬಾಲಕ ನೇಣು ಬಿಗಿದು ಆತ್ಮ*ಹತ್ಯೆ

Kadaba: ಕಡಬ: 14ರ ಬಾಲಕ ನೇಣು ಬಿಗಿದು ಆತ್ಮ*ಹತ್ಯೆ

0 comments

Kadaba: ಕಡಬ (Kadaba) ಠಾಣಾ ವ್ಯಾಪ್ತಿಯ ನೂಜಿಬಾಳ್ತಿಲ ಗ್ರಾಮದಲ್ಲಿ ಶಾಲಾ ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.6 ರಂದು ನಡೆದಿದೆ.

ನೂಜಿಬಾಳ್ತಿಲ ಗ್ರಾಮದ ಖಂಡಿಗ‌ದ ಲೋಕೇಶ್ ಎಂಬವರ ಪುತ್ರ ಗಗನ್(14) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಒಂಭತ್ತನೇ ತರಗತಿಯಲ್ಲಿ ಓದುತ್ತಿದ್ದ ಗಗನ್ ಗುರುವಾರ ದಿನ ಎಂದಿನಂತೆ ಶಾಲೆಗೆ ಹೋಗಿದ್ದು, ಶಾಲೆ ಮುಗಿಸಿ ಸಂಜೆ ಮನೆಗೆ ಬಂದು ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ.

ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.

You may also like