Home » ಆಲಂಕಾರು ಶ್ರೀ ಭಾರತೀ ಶಾಲೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭೇಟಿ

ಆಲಂಕಾರು ಶ್ರೀ ಭಾರತೀ ಶಾಲೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭೇಟಿ

by Praveen Chennavara
0 comments

ಕಡಬ: ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ ಕಡಬ ತಾಲೂಕು ಆಲಂಕಾರು ಗ್ರಾಮದ ಶ್ರೀ ಭಾರತಿ ಶಾಲೆಗೆ ಬುಧವಾರ ಭೇಟಿ ನೀಡಿದರು.
ಶಾಲಾ ಚಟುವಟಿಕೆಯ ಬಗ್ಗೆ ಶಾಲಾ ಆಡಳಿತ ಪ್ರಮುಖರು ಸಚಿವರಿಗೆ ವಿವರಿಸಿದರು. ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಲೆಯಲ್ಲಿನ ಶಿಶುಮಂದಿರ ಕಟ್ಟಡಕ್ಕೆ ಅನುದಾನ ನೀಡುವಂತೆ ಮನವಿ ಸಲ್ಲಿಸಲಾಯಿತು. ಇದಕ್ಕೆ ಸ್ಪಂದಿಸುವುದಾಗಿ ಸಚಿವರು ಭರವಸೆ ನೀಡಿದರು. ಶಾಲೆಯಲಿದ್ದ ವಿದ್ಯಾರ್ಥಿಗಳೊಂದಿಗೆ ಕೆಲ ಕಾಲ ಕಳೆದರು. ಈ ಸಂದರ್ಭ ಶಾಲಾ ಆಡಳಿತ ಮಂಡಳಿಯಿಂದ ಸಚಿವರನ್ನು ಗೌರವಿಸಲಾಯಿತು.

ಆಡಳಿತ ಮಂಡಳಿ ಗೌರವಾಧ್ಯಕ್ಷ ಕೃಷ್ಣ ಕುಮಾರ್ ಅತ್ರಿಜಾಲು,ಅಧ್ಯಕ್ಷ ಡಾ. ಸುರೇಶ್ ಕುಮಾರ್ ಕುಡೂರು, ಸಂಚಾಲಕ ಗಂಗಾಧರ ಗೌಡ ಕುಂಡಡ್ಕ, ಕಾರ್ಯದರ್ಶಿ ಇಂದುಶೇಖರ ಶೆಟ್ಟಿ, ಆಡಳಿತ ಮಂಡಳಿ ಸದಸ್ಯರಾದ ರಾಮಚಂದ್ರ ಭಟ್, ಈಶ್ವರ ಭಟ್ ಮಲ್ಲೇಶ್ ನಗ್ರಿ, ವಿಶಾಲಕ್ಷಿ ನೈಯಲ್ಗ , ಪ್ರಮುಖರಾದ ಪೂವಪ್ಪ ನಾಯ್ಕ, ಪ್ರವೀಣ್ ಆಳ್ವ , ಲಕ್ಷ್ಮೀನಾರಾಯಣ ಪ್ರಭು ಮೊದಲಾದವರಿದ್ದರು.

You may also like

Leave a Comment