Home » Bantwal: ಜೀವ ಕಳೆದುಕೊಂಡ ಜೀವ ವಿಮಾ ಏಜೆಂಟ್ : ಕೆರೆಯಲ್ಲಿ ಶವವಾಗಿ ಪತ್ತೆ

Bantwal: ಜೀವ ಕಳೆದುಕೊಂಡ ಜೀವ ವಿಮಾ ಏಜೆಂಟ್ : ಕೆರೆಯಲ್ಲಿ ಶವವಾಗಿ ಪತ್ತೆ

1 comment
Bantwal

Bantwal: ಬಂಟ್ವಾಳದಲ್ಲಿ(Bantwal) ಜೀವ ವಿಮಾ ಏಜೆಂಟ್ ಒಬ್ಬರು ಆತ್ಮಹತ್ಯೆಗೆ ಶರಣಾದ ಸ್ಥಿತಿಯಲ್ಲಿ ಶವವಾಗಿ ಕೆರೆಯಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಬಂಟ್ವಾಳ ತಾಲೂಕಿನ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ LIC ಏಜೆಂಟ್ ಒಬ್ಬರ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಮೇಲ್ನೋಟಕ್ಕೆ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದ್ದು, ಮೃತರನ್ನು ಸೂರಿಕುಮೇರ್ ನಿವಾಸಿ ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ, ಎಲೈಸಿ ಏಜೆಂಟ್ ನಾರಾಯಣ ಕುಲಾಲ್ ಎಂದು ಗುರುತಿಸಲಾಗಿದೆ.

 

 

ಸೋಮವಾರ ಮುಂಜಾನೆ 5 ರ ವೇಳೆಗೆ ಪರ್ಲೊಟ್ಟು ಎಂಬಲ್ಲಿನ ಕೆರೆಯ ಬಳಿ ಬೈಕ್, ಮೊಬೈಲ್, ಚಪ್ಪಲಿಯನ್ನು ಗಮನಿಸಿದ ಸ್ಥಳೀಯರು ಯಾರೋ ಆತ್ಮಹತ್ಯೆಗೆ ಶರಣಾದ ಶಂಕೆಯಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಮೃತರ ಮನೆಯವರು ನಾರಾಯಣ ಅವರು ಕಾಣೆಯಾದ ಹಿನ್ನೆಲೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಗುಮಾನಿಯಲ್ಲಿ ವಿಟ್ಲ ಪೊಲೀಸ್ ಠಾಣೆ ಹಾಗೂ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ.

ಅಗ್ನಿಶಾಮಕ ದಳದವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಕೆರೆಯಲ್ಲಿ ಹುಡುಕಾಟ ನಡೆಸಿ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಮಂಗಳೂರು: ಮುಸ್ಲಿಂ ಯುವಕನ ಮೇಲೆ ದೈವದ ಆವಾಹನೆ!

You may also like

Leave a Comment