4
ಬೆಳ್ತಂಗಡಿಯ ತಹಶೀಲ್ದಾರ್ ಮಹೇಶ್ .ಜೆ. ಅವರ ವರ್ಗಾವಣೆಯನ್ನು ರದ್ದುಪಡಿಸಿ ಆದೇಶ ಹೊರಡಿಸಲಾಗಿದೆ. ಚಾಮರಾಜನಗರಕ್ಕೆ ವರ್ಗಾವಣೆ ಮಾಡಿದ ಆದೇಶ ರದ್ದಾಗಿದೆ ಎಂದು ತಿಳಿದು ಬಂದಿದೆ.
ಈಗಾಗಲೇ ಡಿ 16 ರಂದು ಬೆಳ್ತಂಗಡಿಯಲ್ಲಿ ಕಳೆದ ಒಂದೂವರೆ ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದ ತಹಶೀಲ್ದಾರ್ ಮಹೇಶ್ ಅವರನ್ನು ಚಾಮರಾಜನಗರಕ್ಕೆ ವರ್ಗಾವಣೆಗೊಳಿಸಿ ಆದೇಶ ಬಂದಿತ್ತು.
ಆದರೆ ಇದೀಗ ವರ್ಗಾವಣೆಯನ್ನು ತಕ್ಷಣ ರದ್ದು ಗೊಳಿಸಿ, ಮುಂದಿನ ಆದೇಶದವರೆಗೆ ಕಾರ್ಯನಿರ್ವಹಿಸುತ್ತಿರುವ ಸ್ಥಳದಲ್ಲೇ ಮುಂದುವರಿಯುವಂತೆ ಆದೇಶ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ.
