Home » ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ನೇತೃತ್ವದ ನಿಯೋಗ ಮುಖ್ಯಮಂತ್ರಿ ಭೇಟಿ.

ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ನೇತೃತ್ವದ ನಿಯೋಗ ಮುಖ್ಯಮಂತ್ರಿ ಭೇಟಿ.

by Praveen Chennavara
0 comments

ಬೆಂಗಳೂರು:ಕರ್ನಾಟಕ ಸರ್ಕಾರವು ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ 1993 ಪ್ರಕರಣ 43(ಆ),48(4) ಹಾಗೂ 48(5)ಕ್ಕೆ ತಿದ್ದುಪಡಿ ತಂದು ಹೊರಡಿಸಿರುವ ಗ್ರಾಮ ಪಂಚಾಯತಿಯ ಸದಸ್ಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ತೆಗೆದು ಹಾಕುವ ನಿಯಮಗಳು 2022” ಕರಡು ಅಧಿಸೂಚನೆಯ ವಾಪಸ್ಸು ಪಡೆಯಬೇಕೆಂದು ಆಗ್ರಹಿಸಿ ವಿಧಾನ ಪರಿಷತ್‌ ಶಾಸಕರುಗಳಾದ ಮಂಜುನಾಥ ಭಂಡಾರಿ ನೇತೃತ್ವದ ನಿಯೋಗವು ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಎಸ್‌. ರವಿ, ದಿನೇಶ್ ಗೂಳಿಗೌಡ ಮಂಡ್ಯ, ರಾಜೇಂದ್ರ ರಾಜಣ್ಣ, ಮಧು ಮಾದೇಗೌಡ, ಅನಿಲ್ ಕುಮಾರ್ ಉಪಸ್ಥಿತರಿದ್ದರು.

ಶಾಸಕರುಗಳ ಅಹವಾಲುಗಳನ್ನು ಸ್ವೀಕರಿಸಿದ ಮುಖ್ಯಮಂತ್ರಿಯವರು ಈ ಬಗ್ಗೆ ಸರಿಯಾದ ಕ್ರಮ ಕೈಗೊಳ್ಳುವ ಭರವಸೆಯನ್ನು ಇದೇ ಸಂದರ್ಭದಲ್ಲಿ ನೀಡಿದರು.

You may also like

Leave a Comment