Home » ಕಾರ್ಮಿಕರ ಮಧ್ಯೆ ಹೊಡೆದಾಟ : ಓರ್ವ ಮೃತ್ಯು

ಕಾರ್ಮಿಕರ ಮಧ್ಯೆ ಹೊಡೆದಾಟ : ಓರ್ವ ಮೃತ್ಯು

by Praveen Chennavara
0 comments

ಮಂಗಳೂರು : ಕಾರ್ಮಿಕರ ಮಧ್ಯೆ ಹೊಡೆದಾಟ ನಡೆದು ಓರ್ವ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿ ಮಾರ್ಬಲ್ ಸಂಸ್ಥೆಯ ಬಳಿ ಶನಿವಾರ ರಾತ್ರಿ ವರದಿಯಾಗಿದೆ.

ಹಲ್ಲೆಯಿಂದ ಗಂಭೀರ ಗಾಯಗೊಂಡು ಮೃತಪಟ್ಟ ಯುವಕನನ್ನು ಬಿಹಾರ ಮೂಲದ ಚೋಟು ಕುಮಾರ್ (21) ಎಂದು ಗುರುತಿಸಲಾಗಿದೆ.

ಮೃತ ಛೋಟು ಮತ್ತು ಆರೋಪಿಗಳು ಕುಳಾಯಿಯ ಮಾರ್ಬಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಶನಿವಾರ ರಾತ್ರಿ ಊಟಕ್ಕೆ ಸಂಬಂಧಿಸಿಂತೆ ಮೂವರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಬಳಿಕ ಅದು ಅತಿರೇಕಕ್ಕೆ ತೆರಳಿ ಹೊಡೆದಾಡಿಕೊಂಡಿದ್ದರು ಎನ್ನಲಾಗಿದೆ. ಹೊಡೆದಾಟದಲ್ಲಿ ಮೂವರೂ ಗಾಯಗೊಂಡಿದ್ದು, ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಛೋಟು ಚಿಕಿತ್ಸೆ ಫಲಕಾರಿಯಾಗದೇ ರವಿವಾರ ಸಂಜೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಗಾಯಗೊಂಡಿದ್ದ ಮತ್ತಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿರುವ ಸುರತ್ಕಲ್ ಪೊಲೀಸರು ಐಪಿಸಿ ಸೆಕ್ಷನ್ 302 ಅಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

You may also like

Leave a Comment