Home » Putturu: ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ಕಾರಣ, ನೊಂದ ವಿದ್ಯಾರ್ಥಿನಿ!!! ವಿಷ ಪದಾರ್ಥ ಸೇವಿಸಿ ಯುವತಿ ಮೃತ್ಯು!

Putturu: ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ಕಾರಣ, ನೊಂದ ವಿದ್ಯಾರ್ಥಿನಿ!!! ವಿಷ ಪದಾರ್ಥ ಸೇವಿಸಿ ಯುವತಿ ಮೃತ್ಯು!

by ಹೊಸಕನ್ನಡ
1 comment
Putturu

Putturu:ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪ್ರತಿಭಾವಂತ ಕ್ರೀಡಾಪಟು, ಕಾಲೇಜು ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ನ.25ರಂದು ನಡೆದಿದೆ(Putturu).

ಕುರಿಯ ಗ್ರಾಮದ ಸಂಪ್ಯ ಮಂಜಪ್ಪ ಗೌಡರ ಪುತ್ರಿ ನಿಶಾ ಬಿ.ಎಮ್.(17ವ) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ನಗರದ ಪದವಿ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿದ್ದು ಕೆಲ ದಿನಗಳ ಹಿಂದೆ ಬಿಹಾರದಲ್ಲಿ ನಡೆದ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಅಲ್ಲಿ ಯಾವುದೇ ಬಹುಮಾನ ದೊರೆಯದೇ ಹಿಂತಿರುಗಿ ಮನೆಗೆ ಬಂದವಳು ಬೇಸರದಲ್ಲಿದ್ದಳು. ನ.14 ರಂದು ವಿಪರೀತವಾಗಿ ವಾಂತಿ ಮಾಡುತ್ತಿದ್ದು, ಇದರಿಂದ ಅಸ್ವಸ್ಥಳಾದವಳನ್ನು ಈ ಬಗ್ಗೆ ವಿಚಾರಿಸಿದಾಗ ತಾನು ನ.13ರಂದು ಸಂಜೆ ತೋಟಕ್ಕೆ ಬೀಡುವ ಕೀಟನಾಶಕವನ್ನು ಸೇವಿಸಿರುವುದಾಗಿ ತಿಳಿಸಿದ್ದಳು. ಕೂಡಲೇ ನಿಶಾಳಿಗೆ ಪುತ್ತೂರು ಮಹಾವೀರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಮುಕ್ಕದಲ್ಲಿನ ಶ್ರೀನಿವಾಸ ಆಸ್ಪತ್ರೆಗೆ ದಾಖಲುಸಲಾಗಿತ್ತು. ಅಲ್ಲಿ ನಿಶಾಳು ಚಿಕಿತ್ಸೆಗೆ ಸ್ಪಂದಿಸದೆ ನ.25 ಮೃತ ಪಟ್ಟಿರುವುದಾಗಿ ಮೃತರ ಸಹೋದರ ನಿಶಾಂತ್ ಸಂಪ್ಯ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದು ಅದರಂತೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Crime News: ಪ್ರವಾದಿಗೆ ಅವಮಾನ ಮಾಡಿದ ಆರೋಪ; ಕಂಡಕ್ಟರ್‌ನನ್ನು ಮಾಂಸ ಕತ್ತರಿಸುವ ಚಾಕುವಿನಿಂದ ಕೊಚ್ಚಿ ಭೀಕರ ಕೊಲೆ!!!

You may also like

Leave a Comment