4
Moodabidre: ಮೂಡುಬಿದಿರೆಯ(Moodabidre) ಪ್ರತಿಷ್ಟಿತ ಆಳ್ವಾಸ್(Alvas) ಶಿಕ್ಷಣ ಸಂಸ್ಥೆಯ ಉದ್ಯೋಗಿಯೊಬ್ಬರು ಸೋಮವಾರ ಮಧ್ಯಾಹ್ನ ಸಂಸ್ಥೌಯು ತನಗೆ ನೀಡಿರುವ ತನ್ನ ವಾಸದ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೌದು, ಆತ್ಮಹತ್ಯೆ ಮಾಡಿಕೊಂಡ ಉದ್ಯೋಗಿಯನ್ನು ಹನುಮಂತ (24) ಎಂದು ಗುರುತಿಸಲಾಗಿದೆ. ಇವರು ಮೂಲತಃ ಬಾಗಲಕೋಟೆಯವರು ಎಂದು ತಿಳಿದುಬಂದಿದೆ. ಅಲ್ಲದೆ ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಹಳೆ ವಿದ್ಯಾರ್ಥಿ ಕೂಡ ಆಗಿದ್ದಾರೆ.
ಪ್ರಸ್ತುತ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದರು. ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೆ ಏನು ಕಾರಣ ಎಂದು ಇನ್ನೂ ತಿಳಿದುಬಂದಿಲ್ಲ. ಸದ್ಯ ಮೂಡಬಿದಿರೆ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: Bigg boss-10: ಬಿಗ್ಬಾಸ್ ಮನೆಗೆ ಹೊಕ್ಕ ಪ್ರದೀಪ್ ಈಶ್ವರ್ಗೆ ಬಿಗ್ ಶಾಕ್ – ಶಾಸಕ ಸ್ಥಾನಕ್ಕೆ ಬಂತು ಕುತ್ತು ?!
