Home » ಕಾರ್ಯಕ್ರಮದಲ್ಲಿ ಭಾವುಕರಾಗಿ ಅಸ್ವಸ್ಥಗೊಂಡ ದಿವಂಗತ ಕದ್ರಿ ಗೋಪಾಲನಾಥ್ ಅವರ ಪತ್ನಿಗೆ ಜಿಲ್ಲಾಧಿಕಾರಿಯಿಂದಲೇ ಪ್ರಥಮ ಚಿಕಿತ್ಸೆ | ವೈದ್ಯರೂ ಆಗಿರುವ ದ.ಕ ಜಿಲ್ಲಾಧಿಕಾರಿಯ ಈ ನಡೆಗೆ ಮೆಚ್ಚುಗೆಯ ಸುರಿಮಳೆ

ಕಾರ್ಯಕ್ರಮದಲ್ಲಿ ಭಾವುಕರಾಗಿ ಅಸ್ವಸ್ಥಗೊಂಡ ದಿವಂಗತ ಕದ್ರಿ ಗೋಪಾಲನಾಥ್ ಅವರ ಪತ್ನಿಗೆ ಜಿಲ್ಲಾಧಿಕಾರಿಯಿಂದಲೇ ಪ್ರಥಮ ಚಿಕಿತ್ಸೆ | ವೈದ್ಯರೂ ಆಗಿರುವ ದ.ಕ ಜಿಲ್ಲಾಧಿಕಾರಿಯ ಈ ನಡೆಗೆ ಮೆಚ್ಚುಗೆಯ ಸುರಿಮಳೆ

by ಹೊಸಕನ್ನಡ
0 comments

ಖಾಸಗಿ ಕಾರ್ಯಕ್ರಮವೊಂದರಲ್ಲಿ ಅಸ್ವಸ್ಥಗೊಂಡ ಮಹಿಳೆಗೆ ಖುದ್ದು ಜಿಲ್ಲಾಧಿಕಾರಿಯವರೇ ಪ್ರಥಮ ಚಿಕಿತ್ಸೆ ನೀಡಿ ಗಮನ ಸೆಳೆದು ಎಲ್ಲರ ಮೆಚ್ಚುಗೆಗೂ ಪಾತ್ರರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಅಸ್ವಸ್ಥಗೊಂಡವರು ಖ್ಯಾತ ಸ್ಯಾಕ್ಸೋಫೋನ್ ಕಲಾವಿದ, ದಿವಂಗತ ಕದ್ರಿ ಗೋಪಾಲನಾಥ್ ಅವರ ಪತ್ನಿ. ಅವರಿಗೆ ಚಿಕಿತ್ಸೆ ನೀಡಿದ್ದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ.

ಬಂಟ್ವಾಳ ತಾಲೂಕಿನ ಸಜಿಪದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಇಂಥದ್ದೊಂದು ವಿದ್ಯಮಾನ ನಡೆದಿದೆ. ಸ್ಯಾಕ್ಸೋಫೋನ್ ಮಾಂತ್ರಿಕ ಕದ್ರಿ ಗೋಪಾಲನಾಥ್ ಅವರ ಸ್ಮರಣಾರ್ಥ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕದ್ರಿ ಗೋಪಾಲನಾಥ್ ಅವರ ಪತ್ನಿ ಸರೋಜಿನಿ ಈ ಕಾರ್ಯಕ್ರಮದಲ್ಲಿ ಭಾವುಕರಾಗಿ ಇದ್ದಕ್ಕಿದ್ದಂತೆ ಅಸ್ವಸ್ಥಗೊಂಡರು. ಕಾರ್ಯಕ್ರಮದಲ್ಲಿ ಹಾಜರಿದ್ದ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಕೂಡಲೇ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಸಮಯಪ್ರಜ್ಞೆ ತೋರಿದರು. ವೈದ್ಯರೂ ಆಗಿರುವ ಜಿಲ್ಲಾಧಿಕಾರಿಯವರ ಈ ನಡೆ ನೆರೆದಿದ್ದವರ ಮೆಚ್ಚುಗೆ ಪಡೆಯಿತು.

You may also like

Leave a Comment